ಹುಣಸೂರು: ‘ರಾಮೇನಹಳ್ಳಿ ಓಂಕಾರೇಶ್ವರ ಜಾತ್ರೆ ಸಮಯದಲ್ಲಿ ಸವರ್ಣೀಯ ಯುವಕರು ದಲಿತ ಹೆಣ್ಣು ಮಕ್ಕಳನ್ನು ಚುಡಾಯಿಸಿ ಅವಾಚ್ಯ ಶಬ್ದ ಪ್ರಯೋಗ ಮತ್ತು ಹಲ್ಲೆ ಮಾಡಿದ್ದು ತಾಲ್ಲೂಕು ಆಡಳಿತ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷದ ಮುಖಂಡ ಕಲ್ಕುಣಿಕೆ ಬಸವರಾಜ್ ಆಗ್ರಹಿಸಿದ್ದಾರೆ.
ನಗರದಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ಘಟನೆಗೆ ಸಂಬಂಧಿಸಿದಂತೆ ಉಪತಹಶೀಲ್ದಾರ್ ನರಸಿಂಹಯ್ಯ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ,‘ಜಾತ್ರೆ ಸಮಯದಲ್ಲಿ ನಿಲುವಾಗಿಲು ಗ್ರಾಮದ ದಲಿತ ಕುಟುಂಬಕ್ಕೆ ಸೇರಿದ ಹೆಣ್ಣು ಮಕ್ಕಳನ್ನು ಸವರ್ಣಿಯ ಸಮುದಾಯದ ಯುವಕರು ಚುಡಾಯಿಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದು ದಲಿತ ಯುವಕರ ಮೇಲೆ ಹಲ್ಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಜಾತಿ ದೌರ್ಜನ್ಯ ಪ್ರಕರಣ ದಾಖಲಿಸಿ ಸೂಕ್ತ ತನಿಖೆ ನಡೆಸಿ ದಲಿತ ಸಮುದಾಯಕ್ಕೆ ರಕ್ಷಣೆ ನೀಡಬೇಕು’ ಎಂದು ಆಗ್ರಹಿಸಿ ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಅಧಿಕಾರಿ ಮಾತನಾಡಿ, ‘ಈ ಸಂಬಂಧ ಸೂಕ್ತ ತನಿಖೆ ನಡೆಸಿ ಕ್ರಮವಹಿಸುವ ಭರವಸೆ ನೀಡಿದರು. ಭಾರತ ಕಮ್ಯೂನಿಸ್ಟ್ ಪಕ್ಷದ ಕಾರ್ಯದರ್ಶಿ ಬೆಳ್ತೂರು ವೆಂಕಟೇಶ್, ಶಿವರಾಮು, ಮಹದೇವ್, ಸಂತೋಷ್, ರಾಜು, ಯಶವಂತ್ ಕಿಶೋರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.