ಮೈಸೂರು: ಹೂಟಗಳ್ಳಿ ನಗರಸಭೆಯ ಬಿಲ್ ಕಲೆಕ್ಟರ್ ದಿನೇಶ್, ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
‘ಮನೆ ನಿರ್ಮಾಣಕ್ಕೆ ಖಾತೆ ಹಾಗೂ ನಕ್ಷೆ ಅನುಮೋದನೆಗೆ ದಿನೇಶ್ ₹2 ಲಕ್ಷ ಲಂಚ ಕೇಳಿದ್ದರು. ಬುಧವಾರ ಸಂಜೆ ನಗರಸಭೆಯ ಬಳಿಯ ಟೀ ಅಂಗಡಿಯೊಂದರಲ್ಲಿ ₹40 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ತಡರಾತ್ರಿಯವರೆಗೆ ಮಹಜರು ನಡೆಸಿ ಪ್ರಕರಣ ದಾಖಲಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
ಲೋಕಾಯುಕ್ತ ಎಸ್‌ಪಿ ಟಿ.ಜೆ. ಉದೇಶ್ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ರವಿಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.