ಬಿಳಿಕೆರೆ (ಮೈಸೂರು): ಹೋಬಳಿಯ ಮಲ್ಲಿನಾಥಪುರದ ಬಳಿ ಮೈಸೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ ಕೆಎಸ್ಆರ್‌ಟಿಸಿ ಬಸ್ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಬನ್ನಿಕುಪ್ಪೆ ಗ್ರಾಮದ ನಾಗಯ್ಯ ಮೃತ. ಹನಗೋಡು ಹೋಬಳಿಯ ತಟ್ಟೆಕೆರೆ ಗ್ರಾಮದ ಮಂಗಳಮ್ಮ, ಅರಸು ಕಲ್ಲಹಳ್ಳಿಯ ಶೇಖರ್, ಧರ್ಮಪುರದ ಕೆಂಡಗಣ್ಣಮ್ಮ, ಮಂಟಿಕೊಪ್ಪಲು ಜಯಮ್ಮ ಅವರು ತೀವ್ರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಳಿಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಾಹನ ತೆರವುಗೊಳಿಸಿ, ರಸ್ತೆ ಸಂಚಾರಕ್ಕೆ ಅನುವು ಮಾಡಿದರು. ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.