ADVERTISEMENT

ಚಾಮುಂಡಿ ಬೆಟ್ಟಕ್ಕೆ ನಟ ಶ್ರೀಮುರಳಿ ಭೇಟಿ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2024, 16:23 IST
Last Updated 17 ಡಿಸೆಂಬರ್ 2024, 16:23 IST
ಚಾಮುಂಡಿಬೆಟ್ಟಕ್ಕೆ ಮಂಗಳವಾರ ನಟ ಶ್ರೀಮುರಳಿ ಭೇಟಿ ನೀಡಿ ಅಭಿಮಾನಿಗಳೊಂದಿಗೆ ಸೆಲ್ಫಿ ತೆಗೆದುಕೊಂಡರು
ಚಾಮುಂಡಿಬೆಟ್ಟಕ್ಕೆ ಮಂಗಳವಾರ ನಟ ಶ್ರೀಮುರಳಿ ಭೇಟಿ ನೀಡಿ ಅಭಿಮಾನಿಗಳೊಂದಿಗೆ ಸೆಲ್ಫಿ ತೆಗೆದುಕೊಂಡರು   

ಮೈಸೂರು: ಜನ್ಮದಿನದ ದಿನದ ಪ್ರಯುಕ್ತ ನಟ ಶ್ರೀಮುರಳಿ ಮಂಗಳವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಗೆ ಪೂಜೆ ಸಲ್ಲಿಸಿದರು.

ಈ ಸಂದರ್ಭ ಪತ್ರಕರ್ತರ ಜೊತೆ ಮಾತನಾಡಿದ ಮುರಳಿ ‘ಕಾಲಾಯ ತಸ್ಮೈ ನಮಃ ಎಂದು ನಾನು ಈ ಹಿಂದೆಯೂ ಹೇಳಿದ್ದೆ. ಈಗಲೂ ಇದನ್ನೇ ಹೇಳುತ್ತೇನೆ. ಕೆಟ್ಟದ್ದು ಬರೋದೇ ಒಳ್ಳೆಯ ದಾರಿಯಲ್ಲಿ ನಡೆಸುವುದಕ್ಕೆ. ಜಾಮೀನಿನ ಮೇಲೆ ಬಿಡುಗಡೆಯಾಗಿರುವ ದರ್ಶನ್ ಆಸ್ಪತ್ರೆಯಿಂದ ಮನೆಗೆ ಬಂದ ಬಳಿಕ ಭೇಟಿಯಾಗುತ್ತೇನೆ’ ಎಂದು ಪ್ರತಿಕ್ರಿಯಿಸಿದರು.

ಚಾಮುಂಡೇಶ್ವರಿ ದೇವಿ ದರ್ಶನದ ಬಳಿಕ ಶಕ್ತಿಧಾಮಕ್ಕೆ ತೆರಳಿ, ಅಲ್ಲಿನ ಮಕ್ಕಳು ಹಾಗೂ ಮಹಿಳೆಯೊಂದಿಗೆ ಹುಟ್ಟುಹಬ್ಬ ಆಚರಿಸಿದರು. ನಂತರ ಶ್ರೀ ಮುರುಳಿ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು ಕೇಕ್ ಕಟ್ ಮಾಡಿಸಿ, ಹಾರ ಹಾಕಿ ಜೈಕಾರ ಕೂಗಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.