ತಿ.ನರಸೀಪುರ: ತಾಲ್ಲೂಕಿನ ಸೋಸಲೆ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 2025-26ನೇ ಸಾಲಿನಲ್ಲಿ 7, 8 ಮತ್ತು 9ನೇ ತರಗತಿಯಲ್ಲಿ ಖಾಲಿ ಉಳಿದಿರುವ ಸೀಟುಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಆಸಕ್ತ ವಿದ್ಯಾರ್ಥಿಗಳು ಶಾಲಾ ಕಚೇರಿಯಿಂದ ಅರ್ಜಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಜೂನ್ 28ರೊಳಗೆ ಶಾಲಾ ಕಚೇರಿಗೆ ಸಲ್ಲಿಸಬೇಕು.
ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಪ್ರಸ್ತುತ ತಿ.ನರಸೀಪುರ ತಾಲ್ಲೂಕು ವ್ಯಾಪ್ತಿಗೆ ಒಳಪಟ್ಟ ಶಾಲೆಯಲ್ಲಿ ಓದುತ್ತಿರಬೇಕು ಅಥವಾ ತಾಲ್ಲೂಕಿನ ನಿವಾಸಿಯಾಗಿರಬೇಕು.
ಪ್ರಸ್ತುತ ಬೇರೆ ತಾಲ್ಲೂಕಿನ ಶಾಲೆಯಲ್ಲಿ ಅಧ್ಯಯನ ಮಾಡುತ್ತಿದ್ದರೆ ಅಂತಹ ವಿದ್ಯಾಥಿಗಳು ವಾಸಸ್ಥಳ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯ. ಆಯ್ಕೆ ಪ್ರಕ್ರಿಯೆ ಪ್ರವೇಶ ಪರೀಕ್ಷೆಯ ಮೂಲಕ ನಡೆಯಲಿದೆ. ಪ್ರವೇಶ ಪರೀಕ್ಷೆಯಲ್ಲಿ ತರಗತಿವಾರು ಪ್ರತ್ಯೇಕ ಪ್ರಶ್ನೆಪತ್ರಿಕೆ ಇರಲಿದೆ. ಖಾಲಿ ಉಳಿದಿರುವ ಸ್ಥಾನಗಳಿಗೆ ಪ್ರವೇಶ ಪರೀಕ್ಷೆಯನ್ನು ಡಯಟ್ ನೋಡಲ್ ಅಧಿಕಾರಿಗಳ ನೇತೃತ್ವದಲ್ಲಿ ಸರ್ಕಾರಿ ಆದರ್ಶ ವಿದ್ಯಾಲಯ ಸೋಸಲೆ ಇಲ್ಲಿ ಜುಲೈ 10ರಂದು ನಡೆಸಲಾಗುವುದು.
ಮಾಹಿತಿಗೆ ಶಾಲೆಯ ಮುಖ್ಯಶಿಕ್ಷಕರನ್ನು ಸಂಪರ್ಕಿಸುವಂತೆ ಶಾಲಾ ಪ್ರಕಟಣೆಯಲ್ಲಿ ಕೋರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.