
ಮೈಸೂರು: ಯುವ ಸಮುದಾಯಕ್ಕೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೈಜ್ಞಾನಿಕ ಉತ್ತೇಜನಕ್ಕಾಗಿ ಮೈಸೂರಿನಲ್ಲಿ ನಿರ್ಮಿಸಲಾಗುತ್ತಿರುವ ಅತ್ಯಾಧುನಿಕ ತಾರಾಲಯಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ₹ 5 ಕೋಟಿ ಹೆಚ್ಚುವರಿ ಅನುದಾನವನ್ನು ಸಂಸದರ ನಿಧಿಯಿಂದ ಬಿಡುಗಡೆ ಮಾಡಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಸಚಿವರು ಮೈಸೂರಿನಲ್ಲಿ ಕಾಸ್ಮೋಲಜಿ– ಶಿಕ್ಷಣ ಮತ್ತು ಸಂಶೋಧನಾ ತರಬೇತಿ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈಗ ಹೆಚ್ಚುವರಿ ಅನುದಾನ ಮಂಜೂರು ಮಾಡಿದ್ದಾರೆ’ ಎಂದು ತಿಳಿಸಿದ್ದಾರೆ.
‘ಈ ಪ್ರಮುಖ ಯೋಜನೆಯು ಮೈಸೂರಿನ ಪ್ರವಾಸಿ ತಾಣದ ಹೆಗ್ಗುರುತಿಗೆ ಮತ್ತೊಂದು ಸೇರ್ಪಡೆಯಾಗಲಿದೆ. ಸ್ಥಳೀಯ ಅಭಿವೃದ್ಧಿಗೆ ಹೊಸ ಮಾರ್ಗ ಅವಕಾಶ ಒದಗಿಸುತ್ತದೆ. ಜ್ಞಾನದ ಕೇಂದ್ರವಾಗಿ ಮೈಸೂರಿನ ಪರಂಪರೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿದೆ. ವಿಶ್ವದ ಮೊದಲ ‘ಬಾಗಿದ ಗುಮ್ಮಟ ತಾರಾಲಯ’ವನ್ನು
ಚಾಮುಂಡಿ ಬೆಟ್ಟದ ರಸ್ತೆಯಲ್ಲಿರುವ ಮೈಸೂರು ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ನಿರ್ಮಿಸಲಾಗುತ್ತಿದೆ. ಇದು ವಿಶ್ವದ ಮೊದಲ ಬಾಗಿದ ಗುಮ್ಮಟಾಕೃತ್ತಿಯ ಎಲ್‌ಇಡಿ ತಾರಾಲಯವಾಗಲಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.