ADVERTISEMENT

ಪ್ರವೇಶ ಶುಲ್ಕ ವಿಚಾರದಲ್ಲಿ ಹೊಂದಾಣಿಕೆ ಅಗತ್ಯ: ಎಸ್.ಸುರೇಶ್‌ಕುಮಾರ್

ಪೋಷಕರು-– ಶಾಲಾ ಆಡಳಿತ ಮಂಡಳಿಗೆ ಸಚಿವರ ಸಲಹೆ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2021, 2:13 IST
Last Updated 16 ಫೆಬ್ರುವರಿ 2021, 2:13 IST
ತಿ.ನರಸೀಪುರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಸೋಮವಾರ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ನೀಡಿದರು
ತಿ.ನರಸೀಪುರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಸೋಮವಾರ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ನೀಡಿದರು   

ತಿ.ನರಸೀಪುರ: ‘ಪೋಷಕರು ಹಾಗೂ ಖಾಸಗಿ ಶಾಲೆಗಳ ನಡುವಿನ ಶುಲ್ಕ ವಿಷಯಕ್ಕೆ ಸಂಬಂಧಿಸಿದಂತೆ ವಸ್ತುಸ್ಥಿತಿ ಅರಿತು ಎರಡು ಕಡೆಯಿಂದ ಹೊಂದಾಣಿಕೆ ಮಾಡಿಕೊಳ್ಳುವುದು ಅಗತ್ಯ’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಸೋಮವಾರ ಸಂಜೆ ಭೇಟಿ ನೀಡಿದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ತಮ್ಮ ಮಕ್ಕಳು ಓದುವ ಶಾಲೆಯ ವಿರುದ್ಧ ಧಿಕ್ಕಾರ ಕೂಗುವುದು ಹಾಗೂ ಶಿಕ್ಷಣ ನೀಡುವ ಶಾಲೆಗಳು ಶುಲ್ಕದ ವಿಷಯದಲ್ಲಿ ಪ್ರತಿಷ್ಠೆಗೆ ಬೀಳುವುದು ಉಚಿತವಲ್ಲ. ಕೋವಿಡ್ ಇರುವುದು ಸ್ವಲ್ಪ ಕಾಲ ಮಾತ್ರ. ಶಿಕ್ಷಣ ವ್ಯವಸ್ಥೆಯಲ್ಲಿ ಶಾಲೆ ಮತ್ತು ಪೋಷಕರು ನಿರಂತರವಾಗಿರಬೇಕು. ಶುಲ್ಕ ವಿಷಯದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡಬಾರದು ಎಂದಿದ್ದೆವು. ಆದರೆ, ಇಲಾಖೆಯ ಆಯುಕ್ತರ ಸಮ್ಮುಖದಲ್ಲಿ ಎರಡು ಕಡೆ ಅಭಿಪ್ರಾಯ ಪಡೆದು ಶೇ 30ರಷ್ಟು ವಿನಾಯಿತಿ ನೀಡುವಂತೆ ತಿಳಿಸಲಾಗಿದೆ. ಪೋಷಕರಿಗೆ ಆರ್ಥಿಕ ಸಮಸ್ಯೆ ಎದುರಾಗಿದ್ದರೆ ಶಾಲೆಗಳಿಗೆ ನಿರ್ವಹಣೆಯ ಸಮಸ್ಯೆ ಎನ್ನಲಾಗುತ್ತಿದೆ. ಈ ವಿಷಯದಲ್ಲಿ ಪರಿಸ್ಥಿತಿಯನ್ನು ಅರಿತು ಎರಡು ಕಡೆಯಿಂದಲೂ ಪರಸ್ಪರ ಒಮ್ಮತದ ನಿರ್ಣಯ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಶಾಸಕ ಎಂ. ಅಶ್ವಿನ್ ಕುಮಾರ್, ಮಾಜಿ ಶಾಸಕ ಸಿ.ರಮೇಶ್, ಡಿಡಿಪಿಐ ಪಾಂಡುರಂಗ, ಬಿಇಒ ಮರಿಸ್ವಾಮಿ ಸೇರಿದಂತೆ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.