ADVERTISEMENT

ಇಗ್ನೊ ಪಿಜಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 5:50 IST
Last Updated 17 ಜನವರಿ 2026, 5:50 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮೈಸೂರು: ‘ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದಲ್ಲಿ ನೂತನ ಸಾಲಿನ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‌ಗಳಿಗೆ 2026ರ ಅವಧಿಗೆ ಪ್ರವೇಶ ಪಡೆಯಬಯಸುವವರು ನಗರದ ಶೇಷಾದ್ರಿ ಅಯ್ಯರ್ ರಸ್ತೆಯ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನಲ್ಲಿನ ಘಟಕ ಸಂಪರ್ಕಿಸಬಹುದು’ ಎಂದು ಅಧ್ಯಯನ ಕೇಂದ್ರದ ಸಂಯೋಜಕ ಬಿ.ಎಸ್.ಶ್ರೀಹರ್ಷ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಸಕ್ತ ವಿದ್ಯಾರ್ಥಿಗಳು https://ignouadmission.samarth.edu.in ಅಲ್ಲಿ ಅಗತ್ಯ ದಾಖಲೆ ಅಪ್‌ಲೋಡ್‌ ಮಾಡಿ ಪ್ರವೇಶ ಪಡೆಯಬಹುದು’ ಎಂದರು.

ADVERTISEMENT

ಬಿಎಎಂ, ಬಿಎಸ್‌ಸಿಎಂ ಕಾರ್ಯಕ್ರಮಗಳಿಗೆ ವಾರ್ಷಿಕ ಆದಾಯ ₹2.5 ಲಕ್ಷಕ್ಕಿಂತ ಕಡಿಮೆಯಿದ್ದಲ್ಲಿ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕದಲ್ಲಿ ಶೇ 50 ವಿನಾಯಿತಿ ಇದೆ ತಿಳಿಸಿದರು.

ಮಾಹಿತಿಗೆ ದೂ. 0821– 2423374 ಸಂಪರ್ಕಿಸಬಹುದು. ಪ್ರವೇಶಾತಿ ಸಂದರ್ಭದಲ್ಲಿ ಗೊಂದಲ ಉಂಟಾದಲ್ಲಿ ವಾಟ್ಸ್‌ಆ್ಯಪ್‌ ಸಂಖ್ಯೆ 9449337272 ಕರೆ ಮಾಡಬಹುದು ಎಂದರು.

ಪ್ರಾದೇಶಿಕ ಸಹಾಯಕ ನಿರ್ದೇಶಕರಾದ ಎಚ್.ಸಿ.ಹೇಮಾ ಮಾಲಿನಿ ಮಾತನಾಡಿ, ‘ಇಗ್ನೊ ಬೆಂಗಳೂರು ಪ್ರಾದೇಶಿಕ ಕೇಂದ್ರದ ವೆಬ್‌ಸೈಟ್‌ನಲ್ಲಿ ಅಧ್ಯಯನ ಕೇಂದ್ರಗಳ ವಿವರ ಲಭ್ಯವಿದೆ. ಎಂಬಿಎಗೆ ನೇರ ಪ್ರವೇಶ ಒದಗಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಸಹ ಸಂಯೋಜಕ ಪ್ರೊ.ಸಿದ್ದರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.