ADVERTISEMENT

ಮೈಸೂರು: ಕೃಷಿ ವಿಜ್ಞಾನಿ ಡಾ.ಎಂ.ಮಹಾದೇವಪ್ಪ ನಿಧನ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2021, 5:02 IST
Last Updated 6 ಮಾರ್ಚ್ 2021, 5:02 IST
ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಕೃಷಿ ವಿಜ್ಞಾನಿ ಮಹದೇವಪ್ಪ ಅವರ ಅಂತಿಮ ದರ್ಶ‌ನ ಪಡೆದರು
ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಕೃಷಿ ವಿಜ್ಞಾನಿ ಮಹದೇವಪ್ಪ ಅವರ ಅಂತಿಮ ದರ್ಶ‌ನ ಪಡೆದರು   

ಮೈಸೂರು: ಕೃಷಿ ವಿಜ್ಞಾನಿ ಜೆಎಸ್ಎಸ್ ಮಹಾವಿದ್ಯಾಪೀಠದ ಗ್ರಾಮೀಣಾಭಿವೃದ್ಧಿ ವಿಭಾಗದ ನಿರ್ದೇಶಕ ಡಾ.ಎಂ.ಮಹಾದೇವಪ್ಪ (83) ಅವರು ಶನಿವಾರ ಬೆಳಿಗ್ಗೆ ನಿಧನರಾದರು.

ಭತ್ತದ ಹೊಸ ಹೊಸ ತಳಿಗಳನ್ನು ಇವರು ಸಂಶೋಧನೆ ಮಾಡಿದ್ದರು. ಹೀಗಾಗಿ ಇವರು ಭತ್ತದ ಮಹದೇವಪ್ಪ ಎಂದೇ ಹೆಸರಾಗಿದ್ದರು. ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕುಲಪತಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಇವರಿಗೆ ಪದ್ಮಶ್ರೀ ಹಾಗೂ ಪದ್ಮಭೂಷಣ ಪುರಸ್ಕಾರಗಳು ಲಭಿಸಿತ್ತು. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಇವರಿಗೆ ಜೀವಮಾನ ಸಾಧನೆ ನೀಡಿ ಗೌರವಿಸಿತ್ತು.

ಚಾಮರಾಜನಗರ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿ ಮಾರ್ಚ್ 7ರಂದು ಅಂತ್ಯಸಂಸ್ಕಾರ ನೆರವೇರಲಿದೆ. ಇವರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಪುತ್ರಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.