ಬೆಟ್ಟದಪುರ: ಸಮೀಪದ ಐಚನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ವೈರಮುಡಿ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಮಹದೇವ ನಾಯಕ ಅವಿರೋಧವಾಗಿ ಆಯ್ಕೆಯಾದರು.
ಸಂಘದ ಕಚೇರಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಭಾನುವಾರ ಚುನಾವಣೆ ಪ್ರಕ್ರಿಯೆ ನಡೆಯಿತು. ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಅಶ್ವಿನ್ ಕುಮಾರ್ ಅವಿರೋಧ ಆಯ್ಕೆ ಘೋಷಣೆ ಮಾಡಿದರು.
ಅಧ್ಯಕ್ಷ ವೈರಮುಡಿಶೆಟ್ಟಿ ಮಾತನಾಡಿ, ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ದುಡಿಯುತ್ತೇನೆ. ಹಾಲು ಉತ್ಪಾದಕರು ಗುಣಮಟ್ಟದ ಹಾಲು ಸರಬರಾಜು ಮಾಡುವ ಮೂಲಕ ಸಂಘದ ಅಭಿವೃದ್ಧಿಗೆ ಕೈಜೋಡಿಸಬೇಕು. ಅವಿರೋಧವಾಗಿ ಆಯ್ಕೆ ಮಾಡಿದ ನಿರ್ದೇಶಕರಿಗೆ ಹಾಗೂ ಮುಖಂಡರಿಗೆ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ರವಿ, ಸಿದ್ಧನಾಯಕ, ನಾಗೇಶ್, ರಾಜೇಗೌಡ, ಸಿ.ವೈರಮುಡಿ ಶೆಟ್ಟಿ, ಗಾಯಿತ್ರಿ, ನಾಗಮ್ಮ, ಗ್ರಾ.ಪಂ ಮಾಜಿ ಅಧ್ಯಕ್ಷ ಎಂ.ಟಿ ಹನುಮಂತ್, ಸಂಘದ ಕಾರ್ಯದರ್ಶಿ ನಾಗನಾಯಕ, ಸಿಬ್ಬಂದಿ ಚಂದ್ರೆಗೌಡ ಸೇರಿದಂತೆ ಗ್ರಾಮದ ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.