ADVERTISEMENT

ತೈಲ ಬೆಲೆ ಏರಿಕೆಗೆ ಆಕ್ರೋಶ: ಕೇಂದ್ರ ಸರ್ಕಾರದ ವಿರುದ್ಧ ಎಐಟಿಯುಸಿ ಪ್ರತಿಭಟನೆ

ತೈಲ ಬೆಲೆ ಏರಿಕೆಗೆ ಆಕ್ರೋಶ, ಕಾರ್ಮಿಕ ವಿರೋಧಿ ಕಾಯ್ದೆ ವಾಪಸ್ ಪಡೆಯಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 9:48 IST
Last Updated 18 ಫೆಬ್ರುವರಿ 2021, 9:48 IST
ಎಐಟಿಯುಸಿ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾರ್ಯಕರ್ತರು ಮಹಾತ್ಮ ಗಾಂಧಿ ಚೌಕದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು
ಎಐಟಿಯುಸಿ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾರ್ಯಕರ್ತರು ಮಹಾತ್ಮ ಗಾಂಧಿ ಚೌಕದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು   

ಮೈಸೂರು: ಕೇಂದ್ರ ಸರ್ಕಾರದ ವಿರುದ್ಧ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ನೇತೃತ್ವದಲ್ಲಿ ಕಾರ್ಯಕರ್ತರು ಗುರುವಾರ ಇಲ್ಲಿನ ಮಹಾತ್ಮ ಗಾಂಧಿ ಚೌಕದಲ್ಲಿ ಪ‍್ರತಿಭಟನೆ ನಡೆಸಿದರು.

ತೈಲ ಬೆಲೆ ಏರಿಕೆಯಿಂದ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿವೆ. ಇದೊಂದು ಅಮಾನವೀಯವಾದ ಬೆಲೆ ಏರಿಕೆ ಎಂದು ಅವರು ಖಂಡಿಸಿದರು.

ಕಳೆದ 80 ದಿನಗಳಿಂದ ರೈತರು ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದರೂ, ರೈತರ ಬೇಡಿಕೆಗಳ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳದೇ ಕೇಂದ್ರ ಸರ್ಕಾರ ಕಾರ್ಪೋರೇಟ್ ಏಜೆಂಟಿನಂತೆ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ರಾಜ್ಯದ ಎಲ್ಲ ಜನಸಾಮಾನ್ಯರಿಗೆ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಬೇಕು, ಕಾರ್ಮಿಕ ವಿರೋಧಿ ಎನಿಸಿರುವ 4 ಕಾರ್ಮಿಕ ಸಂಹಿತೆಗಳನ್ನು ವಾಪಸ್ ಪಡೆಯಬೇಕು, ಭೂ ಸುಧಾರಣಾ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣ ಮಾಡಬಾರದು, ಕನಿಷ್ಠ ಕೂಲಿಯನ್ನು ₹ 21 ಸಾವಿರ ನಿಗದಪಡಿಸಬೇಕು, ಕಾರ್ಮಿಕ ಸಂಘಗಳಿಗೆ ಕಡ್ಡಾಯವಾಗಿ ಮಾನ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಪ‍್ರಧಾನ ಕಾರ್ಯದರ್ಶಿ ಎಚ್.ಆರ್.ಶೇಷಾದ್ರಿ, ಉಪ ಪ್ರಧಾನ ಕಾರ್ಯದರ್ಶಿ ಎಚ್.ಬಿ.ರಾಮಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.