ADVERTISEMENT

ಉಪ ಜಾತಿ ನಮೂದಿಸಲು ಅಳುಕು ಬೇಡ: ದಸಂಸ ಮನವಿ

​ಪ್ರಜಾವಾಣಿ ವಾರ್ತೆ
Published 7 ಮೇ 2025, 14:09 IST
Last Updated 7 ಮೇ 2025, 14:09 IST
ಆಲಗೂಡು ಶಿವಕುಮಾರ್
ಆಲಗೂಡು ಶಿವಕುಮಾರ್   

ಮೈಸೂರು: ‘ಒಳಮೀಸಲಿಗಾಗಿ ನಡೆಸಲಾಗುತ್ತಿರುವ ಸಮೀಕ್ಷೆಯ ವೇಳೆ ಪರಿಶಿಷ್ಟ ಜಾತಿ ಸಮುದಾಯದವರು ಮೂಲ ಉಪಜಾತಿಯ ಹೆಸರು ಮತ್ತು ಇನ್ನಿತರೆ ಮಾಹಿತಿ ಹಂಚಿಕೊಳ್ಳಲು ಹಿಂಜರಿಕೆ ಪಡಬಾರದು’ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಆಲಗೂಡು ಶಿವಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಸಮೀಕ್ಷೆಯ ಭಾಗವಾಗಿ ಗಣತಿದಾರರು ಮೇ 17ರವರೆಗೆ ಮನೆಗಳಿಗೆ ಭೇಟಿ ನೀಡುತ್ತಾರೆ. ಮೇ 19ರಿಂದ 21ರವರೆಗೆ ಆಯಾ ಬೂತ್ ಮಟ್ಟದ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ನಡೆಯುತ್ತದೆ. ಮೇ 19ರಿಂದ 23ರವರೆಗೆ ಮೊಬೈಲ್‌ ಫೋನ್ ಮೂಲಕ ಸ್ವಯಂ ಘೋಷಣೆ ಮಾಡಿಕೊಂಡು ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಅದನ್ನು ಬಳಸಿಕೊಳ್ಳಬೇಕು’ ಎಂದು ಕೋರಿದ್ದಾರೆ.

‘ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಹೊಲಯ, ಮಾದಿಗ, ಕೊರಮ, ಕೊರಚ, ಭೋವಿ, ಲಂಬಾಣಿ, ಅರುಂದತಿಯಾರ್ ಮೊದಲಾದವರು ಉಪಜಾತಿಗಳ ಹೆಸರನ್ನು ಕಡ್ಡಾಯವಾಗಿ ಅಳುಕಿಲ್ಲದೇ ಸಮೀಕ್ಷೆದಾರರಿಗೆ ತಿಳಿಸಿ ದಾಖಲಿಸಬೇಕು. ಮುಖ್ಯವಾಗಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಎಂದು ಜಾತಿ ಪ್ರಮಾಣಪತ್ರ ಪಡೆದಿರುವವರು ಕೂಡ ಕಡ್ಡಾಯವಾಗಿ ಮೂಲ ಉಪಜಾತಿಗಳ ಹೆಸರನ್ನು ನಮೂದಿಸಬೇಕು’ ಎಂದು ತಿಳಿಸಿದ್ದಾರೆ.

ADVERTISEMENT

‘ಪರಿಶಿಷ್ಟ ಜಾತಿಯಲ್ಲಿರುವ ಎಲ್ಲಾ ಉಪಜಾತಿಗಳಿಗೂ ಅವರವರ ಜಾತಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯಲ್ಲಿ ಅವರವರ ನ್ಯಾಯಯುತ ಪಾಲು ಸಿಗಲೇಬೇಕು. ಯಾರಿಗೂ ಅನ್ಯಾಯ ಆಗಬಾರದು. ಹಾಗಾಗಬೇಕಾದರೆ ಈ ಸಮೀಕ್ಷೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲೇಬೇಕಾಗುತ್ತದೆ. ಸಮೀಕ್ಷೆಯ ಮಹತ್ವವನ್ನು ತಿಳಿಸಿಕೊಡುವ ಕೆಲಸ ಮಾಡಬೇಕು’ ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.