ತಿ.ನರಸೀಪುರ: ತಾಲ್ಲೂಕಿನ ಎಡಹಳ್ಳಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಬನ್ನೂರು ಕಚೇರಿ, ಮೈಸೂರು ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಹಕಾರದೊಂದಿಗೆ 1814ನೇ ಮದ್ಯವರ್ಜನ ಶಿಬಿರದ ಸಮಾರೋಪ ನಡೆಯಿತು.
ಶಿಬಿರಾಧಿಕಾರಿ ನಂದಕುಮಾರ್ ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು. 48 ಶಿಬಿರಾರ್ಥಿಗಳು ಭಾಗವಹಿಸಿದ್ದರು.
ವೈ.ಎಸ್. ರಾಮಸ್ವಾಮಿ, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಕೆ.ಎನ್. ಪ್ರಭುಸ್ವಾಮಿ ಮತ್ತು ಶಿಬಿರದ ದೇವಸ್ಥಾನ ಸಮಿತಿ ಅಧ್ಯಕ್ಷ ವೆಂಕಟೇಶ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ವೇದಿಕೆಯಲ್ಲಿ ಸಿದ್ದೇಶ್ವರ ಸಮುದಾಯ ಭವನದ ಆಡಳಿತ ಮಂಡಳಿ ಸದಸ್ಯರಾದ ನಾಗೇಶ್, ಮುಖಂಡರಾದ ಸೋಮಶೇಖರ್, ಬಿ.ಎಸ್. ಜಗದೀಶ್, ಸಿದ್ದೇಶ್ವರ ಪ್ರಾವಿಷನ್ ಸ್ಟೋರ್ ಮಾಲೀಕ ಲಿಖಿತ್, ಮಲಿಯೂರು ಗ್ರಾಮ ಪಂಚಾಯಿತಿ ಸದಸ್ಯ ಜಯರಾಮ್, ಜಿಲ್ಲಾ ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಬನ್ನೂರು ನಾರಾಯಣ್, ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ನಾರಾಯಣ ಸ್ವಾಮಿ, ರೈತ ಸಂಘದ ನಾಗೇಶ್ ಲಕ್ಷ್ಮಿಪುರ, ಶಿಬಿರದ ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷ ಸೋಮಣ್ಣ ಗೊರವನಹಳ್ಳಿ, ಭಾಗ್ಯ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.