
ಬೇಲೂರು: ‘ಪ್ರಸಾದಿಹಳ್ಳಿಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ನಾನು ಬದ್ಧನಾಗಿದ್ದು ಈ ಬಗ್ಗೆ ಕ್ರಮವಹಿಸುತ್ತೇನೆ’ ಎಂದು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು.
ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಸೋಮವಾರ ಆಯೋಜಿಸಿದ್ದ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಿತರಕ್ಷಣ ಸಮಿತಿ ಸಭೆಯಲ್ಲಿ ಅವರು ಮಾತನಾಡಿರು.
‘ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಶಾಸಕನಾಗಿ ಆಯ್ಕೆಯಾಗಿದ್ದೇನೆ. ಕಾಂಗ್ರೆಸ್ ಸರ್ಕಾರ ಇದ್ದರೂ ನನ್ನ ಸರ್ಕಾರ ಎಂದೇ ಹೇಳುತ್ತೇನೆ. ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಹಕಾರದಿಂದ ತಾಲ್ಲೂಕಿನಲ್ಲಿ 30ಕ್ಕೂ ಹೆಚ್ಚು ಸಮುದಾಯ ಭವನಗಳು ನಿರ್ಮಾಣ ಆಗಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ಸಹಕಾರದಿಮದ ನೀರಾವರಿಗೆ ಸಾಕಷ್ಟು ಅನುದಾನ ಹರಿದು ಬಂದಿದೆ. ಎಲ್ಲರೂ ನನ್ನ ಮೇಲೆ ಪ್ರೀತಿ ವಿಶ್ವಾಸ ಇಟ್ಟಿದ್ದಾರೆ’ ಎಂದರು.
ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ಎಂ.ಆರ್.ವೆಂಕಟೇಶ್ ಮಾತನಾಡಿ, ‘ಪ್ರಸಾದಿಹಳ್ಳಿಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಆ ಗ್ರಾಮದ ಕೆಲವು ಸವರ್ಣೀಯರು ಬಿಡುತ್ತಿಲ್ಲ’ ಎಂದು ಆರೋಪಿಸಿದರು.
ತಹಶೀಲ್ದಾರ್ ಶ್ರೀಧರ್ ಕಂಕನವಾಡಿ, ಪೊಲೀಸ್ ಇನ್‌ಸ್ಪೆಕ್ಟರ್ ರೇವಣ್ಣ, ವೃತ್ತನಿರೀಕ್ಷಕ ಜಗದೀಶ್, ಪುರಸಭೆ ಮುಖ್ಯಾಧಿಕಾರಿ ಬಸವರಾಜು ಟಾಕಪ್ಪ ಶಿಗ್ಗಾವಿ, ಬಿಇಒ ಭಾಗ್ಯಮ್ಮ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿಜಯ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಲಿಂಗರಾಜು, ದಲಿತ ಮುಖಂಡ ಪರ್ವತಯ್ಯ, ಚಿಕ್ಕಬ್ಯಾಡಗೆರೆ ಮಂಜುನಾಥ್, ಕರವೇ ಚಂದ್ರಶೇಖರ್, ಈಶ್ವರ್, ದೇವಿಹಳ್ಳಿ ಕುಮಾರ್, ಮರಿಯಪ್ಪ, ಶಂಭುಗನಹಳ್ಳಿ ಬಾಬು, ರಾಮೇನಹಳ್ಳಿ ವೆಂಕಟೇಶ್, ಸತೀಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.