ಕೆ.ಆರ್.ನಗರ: ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನ ರಾಂ ಮತ್ತು ಮಹಾತ್ಮ ಗಾಂಧೀಜಿ ಅವರ ಈಗಿರುವ ಪುತ್ಥಳಿ ಶೀಘ್ರ ಬದಲಾಯಿಸಿ ನೂತನ ಪುತ್ಥಳಿ ಅನಾವರಣಗೊಳಿಸಲಾಗುತ್ತದೆ ಎಂದು ಶಾಸಕ ಡಿ.ರವಿಶಂಕರ್ ಭರವಸೆ ನೀಡಿದರು.
ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಸೋಮವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.
ನಿರ್ಮಾಣ ಹಂತದಲ್ಲಿರುವ ಅಂಬೇಡ್ಕರ್ ಸಮುದಾಯ ಭವನದ ಕಾಮಗಾರಿಗೆ ಈಗಾಗಲೇ ₹2 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಹೆಚ್ಚುವರಿಯಾಗಿ ₹4.50ಕೋಟಿ ಅನುದಾನಕ್ಕಾಗಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರಿಗೆ ಮನವಿ ಮಾಡಲಾಗಿದೆ. ನಮ್ಮ ಮನವಿಗೆ ಸ್ಪಂದಿಸಿದ್ದು, ಕೂಡಲೇ ಅನುದಾನ ತಂದು ಕಾಮಗಾರಿ ಪೂರ್ಣಗೊಳಿಸಿ ಸಮುದಾಯ ಭವನ ಲೋಕಾರ್ಪಣೆ ಗೊಳಿಸಲಾಗುತ್ತದೆ ಎಂದು ಭರವಸೆ ನೀಡಿದರು.
ಅಂಬೇಡ್ಕರ್ ಅವರ ಆಶಯದಂತೆ ರಾಜಕೀಯವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಸಮುದಾಯ ಮುಂದೆ ಬರಬೇಕು, ಅದಕ್ಕಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಪ್ರೇರಣೆ ನೀಡಬೇಕು ಎಂದರು.
ಪುರಸಭೆ ಅಧ್ಯಕ್ಷ ಶಿವುನಾಯಕ್ ಮಾತನಾಡಿ, ಪುರಸಭೆ ಬಳಿ ಅಂಬೇಡ್ಕರ್ ಪುತ್ಥಳಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.
ತಹಶೀಲ್ದಾರ್ ಜಿ.ಸುರೇಂದ್ರಮೂರ್ತಿ, ಆದಿ ಜಾಂಬವ ಸಂಘ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಲೋಕೇಶ್, ಮುಖಂಡರಾದ ಡಿ.ಕೆ.ಕೊಪ್ಪಲು ರಾಜಯ್ಯ, ಹನಸೋಗೆ ನಾಗರಾಜು, ಸಿದ್ದಪ್ಪ, ಶಾಂತಿರಾಜ್, ಕಾಂತರಾಜು, ಎಂ.ಎಚ್.ಸ್ವಾಮಿ ಮಾತನಾಡಿದರು.
ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಮಹೇಶ್, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಮಿಕ್ಸರ್ ಶಂಕರ್, ಸದಸ್ಯರಾದ ಶಂಕರಸ್ವಾಮಿ, ಕೋಳಿ ಪ್ರಕಾಶ್, ವಕ್ತಾರ ಸಯ್ಯದ್ ಜಾಬೀರ್, ಮುಖಂಡರಾದ ದೊಡ್ಡಯ್ಯ, ಗೀತಾ ಮಹೇಶ್, ಡಿ.ಕಾಂತರಾಜು, ತಾಲ್ಲೂಕು ಎಂಎಸ್ಎಸ್ ಅಧ್ಯಕ್ಷ ಎಂ.ಎಸ್.ರವಿಕುಮಾರ್, ಗೊರಗುಂಡಿ ಶ್ರೀನಿವಾಸಪ್ರಸಾದ್, ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ಡಿ.ವಿ.ಗುಡಿ ನಂದೀಶ್, ಎಚ್.ಎಸ್.ವೇಣುಗೋಪಾಲ್, ತಿಮ್ಮಶೆಟ್ಟಿ, ಇಒ ವಿ.ಪಿ.ಕುಲದೀಪ್, ಪುರಸಭೆ ಮುಖ್ಯಾಧಿಕಾರಿ ಬಿ.ವಿ.ವೆಂಕಟೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಚ್.ಎಲ್.ಶಂಕರಮೂರ್ತಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ಡಿ.ನಟರಾಜ್, ಪೊಲೀಸ್ ಇನ್‌ಸ್ಪೆಕ್ಟರ್ ಎಸ್.ಶಿವಪ್ರಕಾಶ್, ಬಿಇಒ ಆರ್.ಕೃಷ್ಣಪ್ಪ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.