ADVERTISEMENT

ಎಚ್.ಡಿ.ಕೋಟೆ: ಹುಲಿ ಮತ್ತೆ ಪ್ರತ್ಯಕ್ಷ; ಕೂಂಬಿಂಗ್‌ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2022, 6:13 IST
Last Updated 15 ಜನವರಿ 2022, 6:13 IST
ರೈತರ ಜಮೀನಿನಲ್ಲಿ ಹುಲಿ ಕಾಣಿಸಿಕೊಂಡಿದ್ದರಿಂದ ಅಂತರಸಂತೆ ವನ್ಯಜೀವಿ ವಲಯದ ಅರಣ್ಯ ಸಿಬ್ಬಂದಿ ಕೂಂಬಿಂಗ್‌ ಕಾರ್ಯ ಆರಂಭಿಸಿದರು
ರೈತರ ಜಮೀನಿನಲ್ಲಿ ಹುಲಿ ಕಾಣಿಸಿಕೊಂಡಿದ್ದರಿಂದ ಅಂತರಸಂತೆ ವನ್ಯಜೀವಿ ವಲಯದ ಅರಣ್ಯ ಸಿಬ್ಬಂದಿ ಕೂಂಬಿಂಗ್‌ ಕಾರ್ಯ ಆರಂಭಿಸಿದರು   

ಎಚ್.ಡಿ.ಕೋಟೆ: ತಾಲ್ಲೂಕಿನ ಅಂತರಸಂತೆ, ನೂರಲಕುಪ್ಪೆ ಬಿ ಗ್ರಾಮದ ಬಳಿ ಹುಲಿ ಮತ್ತೆ ಪ್ರತ್ಯಕ್ಷಗೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಶುಕ್ರವಾರ ಕೂಂಬಿಂಗ್‌ ಆರಂಭಿಸಿದ್ದಾರೆ.

ಅಂತರಸಂತೆಯ ಶರತ್‌ ಹಾಗೂ ಲಕ್ಷ್ಮಣ್‌ ಹುಲಿ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ವಲಯ ಅರಣ್ಯ ಅಧಿಕಾರಿ ಸಿದ್ದರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

‘ಹುಲಿ ಹೆಜ್ಜೆ ಗುರುತು ಪತ್ತೆಯಾಗಿದೆ. ಇಲಾಖೆಯ ಸಿಬ್ಬಂದಿಗೆ ಗೋವಿಂದರಾಜು ಎಂಬುವರ ಜಮೀನಿನ ಸುತ್ತಮುತ್ತ ಗಸ್ತು ತಿರುಗಲು ಸೂಚಿಸಲಾಗಿದೆ. ಜಮೀನಿನ ಸುತ್ತಮುತ್ತ ಟ್ರ್ಯಾಪಿಂಗ್‌ ಕ್ಯಾಮೆರಾ ಅಳವಡಿಸಲಾಗಿದೆ’ ಎಂದು ಸಿದ್ದರಾಜು ತಿಳಿಸಿದರು.

ADVERTISEMENT

ಒಂದು ವಾರದ ಹಿಂದೆ ಅಂತರಸಂತೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಎರಡು ಜಾನುವಾರುಗಳನ್ನು ಕೊಂದಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳ ಮೂಲಕ ಒಂದು ವಾರ ಕಾರ್ಯಾಚರಣೆ ನಡೆಸಿದ್ದರೂ ಹುಲಿ ಪತ್ತೆಯಾಗಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.