
ನಂಜನಗೂಡು: ‘ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಕುರಹಟ್ಟಿ ಮಹೇಶ್, ಉಪಾಧ್ಯಕ್ಷರಾಗಿ ಹಳ್ಳಿದಿಡ್ಡಿ ಮಹದೇವ್ ಅವಿರೋಧವಾಗಿ ಆಯ್ಕೆಯಾದರು.
ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕುರಹಟ್ಟಿ ಮಹೇಶ್, ಉಪಾಧ್ಯಕ್ಷ ಸ್ಥಾನಕ್ಕೆ ಹಳ್ಳಿದಿಡ್ಡಿ ಮಹದೇವ್ ಹೊರತುಪಡಿಸಿ ಬೇರೆಯಾರೂ ನಾಮಪತ್ರ ಸಲ್ಲಿಸದಿದ್ದರಿಂದ ಚುನಾವಣಾಧಿಕಾರಿಗಳು ಅಧ್ಯಕ್ಷರಾಗಿ ಕುರಹಟ್ಟಿ, ಉಪಾಧ್ಯಕ್ಷರಾಗಿ ಹಳ್ಳಿದಿಡ್ಡಿ ಮಹದೇವ್ ಆಯ್ಕೆಯನ್ನು ಘೋಷಿಸಿದರು.
ನೂತನ ಅಧ್ಯಕ್ಷ ಕುರಹಟ್ಟಿ ಮಹೇಶ್ ಮಾತನಾಡಿ, ‘ನಾಲ್ಕನೆ ಬಾರಿಗೆ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ, ನನ್ನ ಆಯ್ಕೆಗೆ ಸಹಕಾರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತೂವಾರಿ ಸಚಿವ ಎಚ್.ಸಿ.ಮಹದೇವಪ್ಪ, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ದರ್ಶನ್ ಧ್ರುವನಾರಾಯಣ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನನ್ನ ಮೇಲೆ ನಂಬಿಕೆಯಿಟ್ಟು ಆಯ್ಕೆ ಮಾಡಿರುವ ಸಹಕಾರ ಸಂಘದ ಸದಸ್ಯರು ಹಾಗೂ ನಿರ್ದೇಶಕರ ಸಹಕಾರ ಪಡೆದು ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ’ ಎಂದು ಹೇಳಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ನಿರ್ದೇಶಕರಾದ ಮಂಜುಳಾ ಮಧು, ಎನ್.ಶ್ರೀನಿವಾಸ್, ವೀರೇದೇವನಪುರ ವಿಜಯ್ ಕುಮಾರ್, ಮುಖಂಡರಾದ ಪ್ರದೀಪ್, ರಂಗದಾಸ್, ಶ್ರೀನಿವಾಸ್, ಕೆಂಪಣ್ಣ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.