ADVERTISEMENT

ರಾಮಕೃಷ್ಣ ವಿದ್ಯಾಶಾಲೆ: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2023, 12:58 IST
Last Updated 6 ಮಾರ್ಚ್ 2023, 12:58 IST

ಮೈಸೂರು: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 2023–24ನೇ ಶೈಕ್ಷಣಿಕ ಸಾಲಿನಲ್ಲಿ ರಾಮಕೃಷ್ಣ ವಿದ್ಯಾಶಾಲೆಗೆ ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು 8ನೇ ತರಗತಿಗೆ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಲು ಏ.20ರಂದು ಪ್ರವೇಶ ಪರೀಕ್ಷೆ ನಡೆಸಲಾಗುವುದು.

ಪರೀಕ್ಷೆಗೆ ಹಾಜರಾಗಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾರ್ಚ್‌ 31ರೊಳಗೆ ಡಾ.ಬಾಬು ಜಗಜೀವನ್‌ರಾಂ ಭವನದ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿದ ದಾಖಲಾತಿಗಳೊಂದಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 0821-2427140 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಸ್ತುಪ್ರದರ್ಶನ, ಮಾರಾಟ ಮೇಳ ನಾಳೆಯಿಂದ

ADVERTISEMENT

ಮೈಸೂರು: ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ-ಕೌಶಲ‌ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾರ್ಚ್‌ 8ರಿಂದ 15ರವರೆಗೆ ಇಲ್ಲಿನ ಜೆ.ಕೆ. ಮೈದಾನದಲ್ಲಿ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳ ಹಮ್ಮಿಕೊಳ್ಳಲಾಗಿದೆ.

ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳು, ಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಸಂಬಂಧ ಆಯೋಜಿಸಿರುವ ವಿಭಾಗೀಯ ಮಟ್ಟದ ಮೇಳ ಇದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ನಾಯಿ ಸಾಕಣೆ ಚಟುವಟಿಕೆ: ನೋಂದಣಿ ಕಡ್ಡಾಯ

ಮೈಸೂರು: ನಾಯಿಗಳ ತಳಿ ಸಂವರ್ಧನೆ, ಮಾರಾಟ ಹಾಗೂ ಮುದ್ದಿನ ಪ್ರಾಣಿಗಳ ಮಳಿಗೆ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿ ಅಥವಾ ಸಂಸ್ಥೆಗಳವರು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ (ನಾಯಿ ತಳಿ ಸಂವರ್ಧನೆ ಮತ್ತು ಮಾರಾಟ ನಿಯಮ-2017 ಮತ್ತು ಮುದ್ದಿನ ಪ್ರಾಣಿ ಮಳಿಗೆ ನಿಯಮ 2018ರ ಸೆಕ್ಷನ್ 3, 4 ಮತ್ತು 5ರ) ಅಡಿಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ.

ಈ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನಗಳೊಳಗೆ ಭರ್ತಿ ಮಾಡಿದ ನಮೂನೆಯಲ್ಲಿ ಅಗತ್ಯ ದಾಖಲಾತಿಗಳು ಹಾಗೂ ನಿಗದಿಪಡಿಸಿದ ಶುಲ್ಕದೊಂದಿಗೆ ನೋಂದಣಿ ಕೋರಿ ಜಿಲ್ಲಾ ಪ್ರಾಣಿ ದಯಾ ಸಂಘದ ಉಪ ನಿರ್ದೇಶಕರು ಹಾಗೂ ಪಶುಪಾಲನಾ ಇಲಾಖೆಗೆ ಸಲ್ಲಿಸಬೇಕು. ತಪ್ಪಿದಲ್ಲಿ ಅಂಥವರ ವಿರುದ್ಧ ಕ್ರಮ ಜರುಗಿಸಲಾಗುವುದು. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: 080-29901411 ಸಂಪರ್ಕಿಸಬಹು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.