ADVERTISEMENT

ಸೇನಾನಿಗಳ ನೆನಪಿಸಿದ ಚಿತ್ರಕಲಾ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2022, 13:39 IST
Last Updated 14 ಆಗಸ್ಟ್ 2022, 13:39 IST
ಕನ್ನಡ ಸಾಹಿತ್ಯ ಕಲಾ ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ಆಯೋಜಿಸಿದ್ದ, ಮೋಹನ್ ಕುಮಾರ್ ಆರಾಧ್ಯ ರಚಿಸಿರುವ ಸ್ವಾತಂತ್ರ್ಯ ಹೋರಾಟಗಾರ ಚಿತ್ರಕಲಾ ಪ್ರದರ್ಶನವನ್ನು ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಉದ್ಘಾಟಿಸಿ ವೀಕ್ಷಿಸಿರು. ಎಂ.ಚಂದ್ರಶೇಖರ್, ಕೆ.ಎಸ್.ಶಿವರಾಮು ಇದ್ದಾರೆ/ ಪ್ರಜಾವಾಣಿ ಚಿತ್ರ

ಮೈಸೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕನ್ನಡ ಸಾಹಿತ್ಯ ಕಲಾಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಕಲಾ ಪ್ರದರ್ಶನವನ್ನು ಕಲಾಮಂದಿರದ ಸುಚಿತ್ರಾ ಗ್ಯಾಲರಿಯಲ್ಲಿ ಭಾನುವಾರ ಆಯೋಜಿಸಲಾಗಿತ್ತು.

ಕಲಾವಿದ ಯು.ಜಿ.ಮೋಹನ್ ಕುಮಾರ್ ಆರಾಧ್ಯ ಅವರು ಪೆನ್‌ನಿಂದ ಬಿಡಿಸಿದ ಸ್ವಾತಂತ್ರ್ಯ ಹೋರಾಟಗಾರ ಭಾವಚಿತ್ರಗಳನ್ನು ಪ್ರದರ್ಶಿಸಲಾಯಿತು.

ವಿಧಾನಪರಿಷತ್‌ ಸದಸ್ಯ ಡಾ.ಡಿ.ತಿಮ್ಮಯ್ಯ ಉದ್ಘಾಟಿಸಿದರು. ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಸಿ.ರೇವಣ್ಣ, ರಂಗಶೆಟ್ಟಿ, ಪುಟ್ಟಣ್ಣ, ಗಿರೀಜಾ, ಹೇಮಾವತಿ, ವೇದಾಂಬ ಅವರನ್ನು ಸನ್ಮಾನಿಸಲಾಯಿತು. ಶಸಾಪ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಹೆಳವರ ಹುಂಡಿ ಸಿದ್ಧಪ್ಪ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಎಪಿಎನ್ ಪ್ರಾಪರ್ಟೀಸ್ ಮ್ಯಾನೇಜಿಂಗ್ ಪಾರ್ಟ್‌ನರ್ ಎ.ಪಿ.ನಾಗೇಶ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.