ಮೈಸೂರು: ‘ಸರ್ಕಾರಗಳು ನಮ್ಮ ನೆಲದ ಕಲೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಪ್ರೋತ್ಸಾಹ ನೀಡಬೇಕು’ ಎಂದು ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಜೆ. ವಿಜಯ್‌ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಇಲ್ಲಿನ ಕಿರುರಂಗಮಂದಿರ ಆವರಣದಲ್ಲಿ ಗೌತಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸೇವಾ ಟ್ರಸ್ಟ್‌ನಿಂದ ಶನಿವಾರ ಆಯೋಜಿಸಿದ್ದ ರಂಗಭೂಮಿ ಮತ್ತು ಜನಪದ ಕಲಾಪ್ರಾಕಾರಗಳ ಉಚಿತ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
‘ಕಲೆ ಮತ್ತು ಸಾಹಿತ್ಯ ಶಿಕ್ಷಕರ ಅವಶ್ಯಕತೆಯೂ ಇದೆ. ವಿದ್ಯಾರ್ಥಿ ಜೀವನದಿಂದಲೇ ಸಮಗ್ರ ವ್ಯಕ್ತಿತ್ವ ರೂಪಿಸುವ ಕಲಿಕೆಯನ್ನು ನೀಡಬೇಕಾಗುತ್ತದೆ. ಆದರೆ, ಇಂದಿನ ನಗರೀಕರಣದ ಕಾರಣದಿಂದಾಗಿ ಇಂದಿನ ಮಕ್ಕಳು ಬಾಲ್ಯದಲ್ಲಿ ಸಿಗಬೇಕಾದ ಅನೇಕ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಇದು ಆತಂಕದ ಬೆಳವಣಿಗೆ’ ಎಂದರು.
‘ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು. ಇದನ್ನು ಚಿಕ್ಕಂದಿನಿಂದಲೇ ಮಕ್ಕಳಿಗೆ ಕಲಿಸಬೇಕು’ ಎಂದು ಹೇಳಿದರು.
ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿದರು. ಗೌತಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸೇವಾ ಟ್ರಸ್ಟ್ ಅಧ್ಯಕ್ಷ ತಲಕಾಡು ಕೃಷ್ಣಮೂರ್ತಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.