ADVERTISEMENT

ತೀವ್ರಗೊಂಡ ಆಶಾ ಕಾರ್ಯಕರ್ತೆಯರ ಮುಷ್ಕರ

1,805 ಕಾರ್ಯಕರ್ತೆಯರ ಪೈಕಿ ಹಾಜರಾದವರು 535 ಮಾತ್ರ!

​ಪ್ರಜಾವಾಣಿ ವಾರ್ತೆ
Published 12 ಜುಲೈ 2020, 4:10 IST
Last Updated 12 ಜುಲೈ 2020, 4:10 IST
ಡಾ.ಬಿ.ಆರ್.ಅಂಬೇಡ್ಕರ್ ಅವರ ನಿವಾಸದ ಮೇಲೆ ನಡೆದ ದಾಳಿಯನ್ನು ಖಂಡಿಸಿ ಬಿಜೆಪಿಯ ಎಸ್‌.ಸಿ ಮೋರ್ಚಾ ಮೈಸೂರು ನಗರ (ಜಿಲ್ಲೆ) ಘಟಕದ ವತಿಯಿಂದ ಪುರಭವನದ ಮುಂಭಾಗದ ಅಂಬೇಡ್ಕರ್ ಪ್ರತಿಮೆ ಎದುರು ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು
ಡಾ.ಬಿ.ಆರ್.ಅಂಬೇಡ್ಕರ್ ಅವರ ನಿವಾಸದ ಮೇಲೆ ನಡೆದ ದಾಳಿಯನ್ನು ಖಂಡಿಸಿ ಬಿಜೆಪಿಯ ಎಸ್‌.ಸಿ ಮೋರ್ಚಾ ಮೈಸೂರು ನಗರ (ಜಿಲ್ಲೆ) ಘಟಕದ ವತಿಯಿಂದ ಪುರಭವನದ ಮುಂಭಾಗದ ಅಂಬೇಡ್ಕರ್ ಪ್ರತಿಮೆ ಎದುರು ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು   

ಮೈಸೂರು: ಜಿಲ್ಲೆಯಲ್ಲಿ ಸತತ 2ನೇ ದಿನವಾದ ಶನಿವಾರವೂ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಮುಂದುವರಿದಿದೆ. ಒಟ್ಟು 1,805 ಕಾರ್ಯಕರ್ತೆಯರ ಪೈಕಿ 1,270 ಮಂದಿ ಗೈರಾಗುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು. ಬೇಡಿಕೆಗಳು ಈಡೇರುವವರೆಗೂ ಕರ್ತವ್ಯಕ್ಕೆ ಮರಳುವುದಿಲ್ಲ ಎಂಬ ಸಂದೇಶ ರವಾನಿಸಿದರು.

ಜಿಲ್ಲೆಯ ಹಲವೆಡೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮನವಿ ಪತ್ರ ಸಲ್ಲಿಸುವ ಮೂಲಕ ಗೌರವ ಧನ ಹೆಚ್ಚಿಸಬೇಕು ಒತ್ತಾಯಿಸಿದರು.

ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಇವರ ಪ್ರತಿಭಟನೆಗೆ ಬೆಂಬಲ ನೀಡಿತು.

ADVERTISEMENT

ಪ್ರತಿಭಟನೆಯಿಂದ ಆರೋಗ್ಯ ಇಲಾಖೆಯ ಸೇವೆಗಳಿಗೆ ತೊಂದರೆಯಾಯಿತು. ಕ್ವಾರಂಟೈನ್‌ನಲ್ಲಿರುವವರ ಆರೋಗ್ಯ ವಿಚಾರಣೆ ಸೇರಿದಂತೆ ಹಲವು ಜವಾಬ್ದಾರಿಗಳನ್ನು ಆಶಾ ಕಾರ್ಯಕರ್ತೆಯರಿಗೆ ವಹಿಸಲಾಗಿದೆ. ಇವರು ಗೈರಾದ ಕಡೆಗಳಲ್ಲೆಲ್ಲ ಆರೋಗ್ಯ ಇಲಾಖೆಯ ಕಿರಿಯ ಆರೋಗ್ಯ ಸಹಾಯಕರೇ ಕೆಲಸ ನಿರ್ವಹಿಸಿದರು.

ಅಂಬೇಡ್ಕರ್ ನಿವಾಸದ ಮೇಲೆ ದಾಳಿಗೆ ಖಂಡನೆ:

ಅಂಬೇಡ್ಕರ್ ಅವರ ನಿವಾಸದ ಮೇಲೆ ನಡೆದ ದಾಳಿಯನ್ನು ಖಂಡಿಸಿ ಬಿಜೆಪಿಯ ಎಸ್‌.ಸಿ. ಮೋರ್ಚಾದ ಮೈಸೂರು ನಗರ (ಜಿಲ್ಲೆ) ಘಟಕದ ನೇತೃತ್ವದಲ್ಲಿ ಇಲ್ಲಿನ ಪುರಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಶನಿವಾರ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಇದೆ. ಈ ಸರ್ಕಾರದ ಗೃಹ ಸಚಿವರು ಘಟನಾ ಸ್ಥಳಕ್ಕೆ ಭೇಟಿ ಕೊಡದೇ ಇರುವುದು ನಿಜಕ್ಕೂ ಸರಿಯಲ್ಲ ಎಂದು ಖಂಡಿಸಿದರು.‌

ಈ ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ನಿರ್ಲಕ್ಷ್ಯ ವಹಿಸಿದ ಅಲ್ಲಿನ ಪೊಲೀಸ್ ಕಮಿಷನರ್‌ ಅವರನ್ನು ವರ್ಗಾವಣೆ ಮಾಡಬೇಕು. ಅಂಬೇಡ್ಕರ್ ನಿವಾಸಕ್ಕೆ ಭದ್ರತೆ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

ಸಂಘಟನೆಯ ಅಧ್ಯಕ್ಷ ಸಿ.ಈಶ್ವರ್, ಪ್ರಧಾನ ಕಾರ್ಯದರ್ಶಿಗಳಾದ ಎಂ.ನರಸಿಂಹಮೂರ್ತಿ, ಎಚ್.ಜಯರಾಮ್ ಸೇರಿದಂತೆ ಅನೇಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.