ಮೈಸೂರು: ಇಲ್ಲಿನ ಮಾಸ್ಟರ್ಸ್ ಅಥ್ಲೀಟ್, ಮೈಸೂರು ಅಥ್ಲೆಟಿಕ್ಸ್ ಕ್ಲಬ್ ಕಾರ್ಯದರ್ಶಿ ಎಂ. ಯೋಗೇಂದ್ರ ಅವರು ನವೆಂಬರ್ 5ರಿಂದ 9ರವರೆಗೆ ಚೆನ್ನೈನಲ್ಲಿ ನಡೆಯಲಿರುವ 23ನೇ ಏಷ್ಯನ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಅವರು 60 ವರ್ಷ ಮೇಲ್ಪಟ್ಟವರ ವಿಭಾಗದ 2 ಸಾವಿರ ಮೀಟರ್ಸ್ ಸ್ಟೀಪಲ್ ಚೇಸ್ ಸ್ಪರ್ಧೆಯಲ್ಲಿ ಓಡಲಿದ್ದಾರೆ. 46 ವರ್ಷಗಳಿಂದ ಅಥ್ಲೆಟಿಕ್ಸ್‌ನಲ್ಲಿ ದೂರದ ಓಟಗಾರರಾಗಿ ಗುರುತಿಸಿಕೊಂಡಿರುವ ಯೋಗೇಂದ್ರ, ಈವರೆಗೆ ಹಲವು ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾರತವನ್ನು ಪ್ರತಿನಿಧಿಸಿ 60ಕ್ಕೂ ಹೆಚ್ಚು ಚಿನ್ನ, 50 ಬೆಳ್ಳಿ ಹಾಗೂ 48 ಕಂಚಿನ ಪದಕಗಳನ್ನು ಗೆದ್ದಿದ್ದಾರೆ.
2016ರಲ್ಲಿ ಚೀನಾದಲ್ಲಿ ನಡೆದ 20ನೇ ಏಷ್ಯನ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ 2 ಕಂಚು ಹಾಗೂ 2014ರಲ್ಲಿ ಜಪಾನ್‌ನಲ್ಲಿ ನಡೆದ 19ನೇ ಏಷ್ಯನ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ರಿಲೇನಲ್ಲಿ ಕಂಚಿನ ಪದಕ ಸಾಧನೆ ಮಾಡಿದ್ದಾರೆ ಎಂದು ಮೈಸೂರು ಅಥ್ಲೆಟಿಕ್ಸ್ ಕ್ಲಬ್ ಅಧ್ಯಕ್ಷ ಚೈನ್‌ಸಿಂಗ್ ಪುರೋಹಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.