ಸಾಂದರ್ಭಿಕ ಚಿತ್ರ
ಮೈಸೂರು: ನಂಜನಗೂಡು ತಾಲ್ಲೂಕು ತಗಡೂರಿನ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ 2024–25ನೇ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 95 ಫಲಿತಾಂಶ ದೊರೆತಿದೆ.
ಪರೀಕ್ಷೆಗೆ ಹಾಜರಾದ 60 ವಿದ್ಯಾರ್ಥಿಗಳಲ್ಲಿ 57 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅತ್ಯುನ್ನತ ದರ್ಜೆ– 5, ಪ್ರಥಮ ದರ್ಜೆ– 40 ಹಾಗೂ ದ್ವಿತೀಯ ದರ್ಜೆಯಲ್ಲಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕೆ.ಪಿ.ಚೇತನಾ, ಎಂ.ಆರ್.ಲಿಖಿತ್, ಕೆ.ಆರ್.ಮೋಹನ್ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಗಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.