ಮೈಸೂರು: ತಿ.ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಮಗುವನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಿ ಎಂದು ಸಲಹೆ ನೀಡಿದ ಸೀಹಳ್ಳಿ ಗ್ರಾಮದ ಆಶಾ ಕಾರ್ಯಕರ್ತೆ ಲಕ್ಷ್ಮಿ ಎಂಬುವವರ ಮೇಲೆ ಹಲ್ಲೆ ನಡೆಸಿದ ಮಗುವಿನ ತಂದೆ ಸಿದ್ಧರಾಜು ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಹಲ್ಲೆ ಬುಧವಾರ ನಡೆದಿತ್ತು.
‘ಮದುವೆಯಾಗಿ 5 ವರ್ಷದ ನಂತರ ಮಗು ಜನಿಸಿದ್ದು ಆರೈಕೆ ಕೇಂದ್ರಕ್ಕೆ ಸೇರಿಸುವುದಿಲ್ಲ’ ಎಂದು ಸಿದ್ದರಾಜು ಪ್ರತಿಪಾದಿಸಿದ್ದರು. ಆ ಸಂದರ್ಭದಲ್ಲಿ ವಾಗ್ವಾದ ನಡೆದು ಹಲ್ಲೆ ನಡೆಸಿದ್ದರು’ ಎಂದು ಲಕ್ಷ್ಮಿ ದೂರಿನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.