ಪಿರಿಯಾಪಟ್ಟಣ: ಅಲೆಮಾರಿ ಕುಟುಂಬದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಈಚೆಗೆ ಪಟ್ಟಣದಲ್ಲಿ ನಡೆದಿದೆ.
ಅತ್ಯಾಚಾರಕ್ಕೆ ಯತ್ನಿಸಿದಾಗ ಬಾಲಕಿ ತಪ್ಪಿಸಿಕೊಂಡು ಹೋಗಿ ತಂದೆ ತಾಯಿಗೆ ವಿಷಯ ತಿಳಿಸಿದ್ದಾಳೆ. ಮರುದಿನ ಬಾಲಕಿ ಪೋಷಕರು ಆರೋಪಿಯ ಮನೆ ಮುಂದೆ ಹೋಗಿ ಗಲಾಟೆ ಮಾಡಿದಾಗ, ಆರೋಪಿಯ ಮಗಳು ಇವರ ಮೇಲೆಯೇ ಹಲ್ಲೆ ಮಾಡಿದ್ದಾಳೆ.
ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ತಂದೆ ಮತ್ತು ಮಗಳ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.