
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ಹುಣಸೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದರಿಂದ ನಿಯಂತ್ರಣ ತಪ್ಪಿದ ಗೂಡ್ಸ್ ಆಟೊ ಕೆರೆಗೆ ಉರುಳಿದ್ದು, ಚಾಲಕ ಮೃತರಾದರು.
ಎಳನೀರು ವ್ಯಾಪಾರ ನಡೆಸುತ್ತಿದ್ದ ಉದ್ದೂರು ಗ್ರಾಮದ ನಿವಾಸಿ ರಾಜು (47) ಮೃತ ಚಾಲಕ. ವ್ಯಾಪಾರ ಮುಗಿಸಿ ಗ್ರಾಮಕ್ಕೆ ತೆರಳುತ್ತಿದ್ದಾಗ ಮೂಕನಹಳ್ಳಿ ಕೆರೆ ಏರಿ ಬಳಿ ಹಿಂಬದಿಯಿಂದ ವಾಹನವೊಂದು ಡಿಕ್ಕಿ ಹೊಡೆದಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ಆಟೊ ಕೆರೆಯಲ್ಲಿ ಮುಳುಗಿದೆ ಎಂದು ಸರ್ಕಲ್ ಇನ್‌ಸ್ಪೆಕ್ಟರ್ ಸಂತೋಷ್ ಕಾಶ್ಯಪ್ ತಿಳಿಸಿದ್ದಾರೆ.
ಮೃತರಿಗೆ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.