ADVERTISEMENT

ಆಯುಷ್ ಔಷಧಿ ವಿತರಣೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2020, 15:20 IST
Last Updated 2 ಜುಲೈ 2020, 15:20 IST
ಆಯುಷ್ ಇಲಾಖೆಯ ಮೈಸೂರಿನ ವೈದ್ಯರಾದ ಡಾ.ರಾಘವೇಂದ್ರ, ಡಾ.ಸ್ವರ್ಣಲತಾ ಅವರು ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ಸೀತಾಲಕ್ಷ್ಮೀ ಮಾರ್ಗದರ್ಶನದಲ್ಲಿ ಜಿಲ್ಲಾ ಕೇಂದ್ರ ಗ್ರಂಥಾಲಯಗಳ ಸಿಬ್ಬಂದಿಗೆ ಔಷಧ ವಿತರಿಸಿದರು
ಆಯುಷ್ ಇಲಾಖೆಯ ಮೈಸೂರಿನ ವೈದ್ಯರಾದ ಡಾ.ರಾಘವೇಂದ್ರ, ಡಾ.ಸ್ವರ್ಣಲತಾ ಅವರು ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ಸೀತಾಲಕ್ಷ್ಮೀ ಮಾರ್ಗದರ್ಶನದಲ್ಲಿ ಜಿಲ್ಲಾ ಕೇಂದ್ರ ಗ್ರಂಥಾಲಯಗಳ ಸಿಬ್ಬಂದಿಗೆ ಔಷಧ ವಿತರಿಸಿದರು   

ಮೈಸೂರು: ರಾಜ್ಯದಲ್ಲಿ ಕೋವಿಡ್‌–19 ಪ್ರಕರಣ ಉಲ್ಭಣಗೊಳ್ಳುತ್ತಿದ್ದು, ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ, ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಿಕೊಳ್ಳಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಅಂಗವಾಗಿ ಮೈಸೂರಿನ ನಗರ ಕೇಂದ್ರ ಗ್ರಂಥಾಲಯದಲ್ಲಿ ಗುರುವಾರ ಆಯುಷ್ ಔಷಧಿಗಳನ್ನು ಸಿಬ್ಬಂದಿಗೆ ವಿತರಿಸಲಾಯಿತು.

ಮೈಸೂರಿನ ಆಯುಷ್ ಇಲಾಖೆಯ ವೈದ್ಯರಾದ ಡಾ.ರಾಘವೇಂದ್ರ, ಡಾ.ಸ್ವರ್ಣಲತಾ ಅವರು ಮೈಸೂರು ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ಸೀತಾಲಕ್ಷ್ಮೀ ಮಾರ್ಗದರ್ಶನದಲ್ಲಿ ಜಿಲ್ಲಾ ಕೇಂದ್ರ ಗ್ರಂಥಾಲಯಗಳ ಸಿಬ್ಬಂದಿಗೆ ಔಷಧ ವಿತರಿಸಿದರು.

ಮಂಡಕಳ್ಳಿ ವಿಮಾನ ನಿಲ್ದಾಣ, ಇಲ್ಲಿನ ಗಡಿ ಭಾಗದ ಚೆಕ್ ಪೋಸ್ಟ್ (ಬಿ.ಆರ್.ಸಿ) ಮಟ್ಟದಲ್ಲಿ ಕೋವಿಡ್-19 ಸಂಬಂಧ ಕಾರ್ಯ ನಿರ್ವಹಿಸುತ್ತಿರುವ ಗ್ರಂಥಾಲಯ ಇಲಾಖೆಯು ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಿಬ್ಬಂದಿಗೆ ಕೋವಿಡ್-19 ರೋಗ ನಿರೋಧಕ ಆಯುಷ್ ಔಷಧಿ ವಿತರಿಸುವುದರ ಜೊತೆಗೆ ಔಷಧಿಗಳ ಬಳಕೆಯ ಬಗ್ಗೆ ಸೂಕ್ತ ಮಾಹಿತಿ ನೀಡಿದರು.

ADVERTISEMENT

ನಗರ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕರಾದ ಮಂಜುನಾಥ್ ಬಿ. ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.