ADVERTISEMENT

ರೈತರ ಹೋರಾಟಕ್ಕೆ ಒಂದು ವರ್ಷ: ನ.26ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2021, 7:16 IST
Last Updated 23 ನವೆಂಬರ್ 2021, 7:16 IST
ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿದರು
ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿದರು   

ಮೈಸೂರು: ಕೇಂದ್ರ ಸಕಾ೯ರದ ರೈತ-ಜನ ವಿರೋಧಿ ಕಾಯ್ದೆಗಳು ಹಾಗೂ ನೀತಿಯನ್ನು ವಿರೋಧಿಸಿ ನವದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ನ.26ಕ್ಕೆ ವಷ೯ ಪೂಣ೯ಗೊಳಿಸಲಿದ್ದು, ಸಂಯುಕ್ತ ಹೋರಾಟ ಸಮಿತಿಯಿಂದ ರಾಜ್ಯದ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿ ತಡೆ ಚಳವಳಿ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಂಗಳವಾರ ಇಲ್ಲಿ ತಿಳಿಸಿದರು.

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನಾಗಬೇಕು.

ಮಳೆಯಿಂದ ಬೆಳೆ ಹಾನಿಯಾಗಿದ್ದು ವೈಜ್ಞಾನಿಕವಾಗಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರಾಜ್ಯದ 17 ಕಡೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗುವುದು ಎಂದು ಬಡಗಲಪುರ ನಾಗೇಂದ್ರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ADVERTISEMENT

ಡಿಸೆಂಬರ್ ತಿಂಗಳಲ್ಲಿ ರಾಜ್ಯದ 10 ಕಡೆ ಮಹಾಪಂಚಾಯತ್ ನಡೆಸುತ್ತೇವೆ. ಜನವರಿಯಲ್ಲಿ ಜನಾಧಿವೇಶನ ನಡೆಸುತ್ತೇವೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.