ADVERTISEMENT

ಕೃಷಿ ಕಾಯ್ದೆ ರದ್ದುಗೊಳಿಸಿದ ಕಾರಣ ಜನರಿಗೆ ತಿಳಿಸಿ: ಬಡಗಲಪುರ ನಾಗೇಂದ್ರ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2021, 10:23 IST
Last Updated 19 ನವೆಂಬರ್ 2021, 10:23 IST
ಬಡಗಲಪುರ ನಾಗೇಂದ್ರ
ಬಡಗಲಪುರ ನಾಗೇಂದ್ರ   

ಮೈಸೂರು: ಮೂರು ಕೃಷಿ ಕಾಯ್ದೆ ರದ್ದುಗೊಳಿಸಿದ ನೈಜ ಕಾರಣವನ್ನು ದೇಶದ ಜನರಿಗೆ ತಿಳಿಸಿ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಶುಕ್ರವಾರ ಇಲ್ಲಿ ಆಗ್ರಹಿಸಿದರು.

ಚಳವಳಿಗೆ ಜಯ ಸಿಕ್ಕಿದೆ. ಇತಿಹಾಸ ಪುನರಾವರ್ತನೆಗೊಂಡಿದೆ ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂತಸ ವ್ಯಕ್ತಪಡಿಸಿದ ಅವರು, ಕಿಸಾನ್ ಮೋಚಾ೯ ಹೋರಾಟ ಅಚಲ. ಜನ ವಿರೋಧಿ ನೀತಿ ವಿರುದ್ಧ ಮುಂದುವರೆಯಲಿದೆ ಎಂದು ಘೋಷಿಸಿದರು.

ಕನಿಷ್ಠ ಬೆಂಬಲ ಬೆಲೆಗೆ ಶಾಸನದ ಬೆಂಬಲ ನೀಡಬೇಕು. ವಿದ್ಯುತ್ ಮಸೂದೆ ವಾಪಸ್ ಪಡೆಯಬೇಕು, ರದ್ದುಗೊಳಿಸಿದ ಕಾಮಿ೯ಕ ಸಂಹಿತೆಯ ನಾಲ್ಕು ಕೋಡ್ ಗಳನ್ನು ವಾಪಸ್ ಕೊಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಸಹ ಭೂ ಸುಧಾರಣೆ, ಎಪಿಎಂಸಿ, ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯನ್ನು ವಾಪಸ್ ಪಡೆಯಬೇಕು ಎಂದು ನಾಗೇಂದ್ರ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.