ADVERTISEMENT

ಸಂಗೀತದಲ್ಲಿ ಬಾಗಲಕೋಟೆ ಪ್ರಥಮ

ರಾಜ್ಯಮಟ್ಟದ ಪ್ರತಿಭಾ ಕಾರಂಜಿ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2018, 15:30 IST
Last Updated 17 ಡಿಸೆಂಬರ್ 2018, 15:30 IST
ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಸಂಗೀತ ವಿಭಾಗದಲ್ಲಿ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಚಿಕ್ಕಮುಚ್ಚಳಗುಡ್ಡದ ಸರ್ಕಾರಿ ಆದರ್ಶ ವಿದ್ಯಾಲಯ ತಂಡ ಪ್ರಥಮ ಬಹುಮಾನ ಪಡೆಯಿತು
ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಸಂಗೀತ ವಿಭಾಗದಲ್ಲಿ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಚಿಕ್ಕಮುಚ್ಚಳಗುಡ್ಡದ ಸರ್ಕಾರಿ ಆದರ್ಶ ವಿದ್ಯಾಲಯ ತಂಡ ಪ್ರಥಮ ಬಹುಮಾನ ಪಡೆಯಿತು   

ಮೈಸೂರು: ನಗರದಲ್ಲಿ ಮೂರು ದಿನಗಳಿಂದ ನಡೆಯುತ್ತಿದ್ದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯ ಸಂಗೀತ ವಿಭಾಗದಲ್ಲಿ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಚಿಕ್ಕಮುಚ್ಚಳಗುಡ್ಡದ ಸರ್ಕಾರಿ ಆದರ್ಶ ವಿದ್ಯಾಲಯ ಪ್ರಥಮ ಬಹುಮಾನ ಪಡೆಯಿತು.

ಸೋಮವಾರ ನಡೆದ ಸಮಾರೋಪ ಸಮಾರಂಭದಲ್ಲಿ ಪ್ರಥಮ ಬಹುಮಾನವಾಗಿ ತಂಡದ 8 ವಿದ್ಯಾರ್ಥಿಗಳಿಗೆ ಒಟ್ಟು ₹ 60 ಸಾವಿರ ನಗದು ಬಹುಮಾನ ನೀಡಲಾಯಿತು. ಧಾರವಾಡ ಜಿಲ್ಲೆಯ ಹಿರೇಹೊನ್ನಳ್ಳಿ ಕೆ.ಆರ್.ಸಿ.ಎಸ್ ಪ್ರೌಢಶಾಲೆಗೆ ದ್ವಿತೀಯ ಬಹುಮಾನ (₹ 30 ಸಾವಿರ), ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯ ತೃತೀಯ ಬಹುಮಾನ (₹ 18 ಸಾವಿರ) ಪಡೆಯಿತು.

ನಾಟಕ ವಿಭಾಗದಲ್ಲಿ ಹಾಸನ ಜಿಲ್ಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆ (ಪ್ರಥಮ), ಬೆಂಗಳೂರಿನ ಯಶವಂತಪುರದ ಬಾಪು ಪ್ರೌಢಶಾಲೆ (ದ್ವಿತೀಯ), ಬಾಗಲಕೋಟೆ ಜಿಲ್ಲೆಯ ಜಮಖಂಡಿ ತುಂಗಳ ಪ್ರೌಢಶಾಲೆ (ತೃತೀಯ), ನೃತ್ಯ ವಿಭಾಗದಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಸರ್ಕಾರಿ ಪ್ರೌಢಶಾಲೆ (ಪ್ರಥಮ), ಮಂಡ್ಯ ಜಿಲ್ಲೆಯ ಪೂರ್ಣಪ್ರಜ್ಞ ಪ್ರೌಢಶಾಲೆ (ದ್ವಿತೀಯ), ದಕ್ಷಿಣ ಕನ್ನಡ ಜಿಲ್ಲೆಯ ಎಸ್‌.ವಿ.ಎಸ್ ಕನ್ನಡ ಮಾಧ್ಯಮ ಶಾಲೆ (ತೃತೀಯ) ಬಹುಮಾನ ಪಡೆದವು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.