ADVERTISEMENT

ಬನ್ನೂರು: ಉದ್ಯೋಗ ಮೇಳ 31 ರಂದು

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2025, 3:07 IST
Last Updated 26 ಆಗಸ್ಟ್ 2025, 3:07 IST
   

ತಿ.ನರಸೀಪುರ‌: ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನಿಲ್ ಬೋಸ್ ಜನ್ಮದಿನದ ಪ್ರಯುಕ್ತ ಭಾನುವಾರ (ಆ.31) ಬೆಳಿಗ್ಗೆ 10 ಗಂಟೆಗೆ ತಾಲ್ಲೂಕಿನ ಬನ್ನೂರು ಪಟ್ಟಣದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಮೈಮುಲ್ ಅಧ್ಯಕ್ಷ ಆರ್. ಚೆಲುವರಾಜು ತಿಳಿಸಿದ್ದಾರೆ.

‘ಉದ್ಯೋಗ ಮೇಳದಲ್ಲಿ 100ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ. ಕ್ಷೇತ್ರದ ಯುವಕರಿಗೆ ಭವಿಷ್ಯದ ದಾರಿ ಸಿಗುವ ವಿಶ್ವಾಸವಿದೆ. ಅದರಲ್ಲೂ ವಿಶೇಷವಾಗಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ನಿರುದ್ಯೋಗಿ ಯುವಕರು ಹಾಗೂ ಯುವತಿಯರಿಗೆ ಉತ್ತಮ ಉದ್ಯೋಗಾವಕಾಶ ಲಭ್ಯವಾಗಲಿವೆ ಎಂದು ಪ್ರಕಟಣೆಯಲ್ಲಿ ಅವರು ಮಾಹಿತಿ ನೀಡಿದ್ದಾರೆ.

ಮಾಹಿತಿಗೆ 99865 62326 (ಚೆನ್ನಕೇಶವ), 98454 47046 (ಬಸವರಾಜು), 99869 19921 (ಮುನಾವರ್ ಪಾಷಾ) ಅವರನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.