ADVERTISEMENT

ಎಲ್ಲರೂ ಬಸವ ತತ್ವ ಪಾಲಿಸೋಣ; ಸಚಿವ ಎಸ್.ಟಿ.ಸೋಮಶೇಖರ್ 

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2020, 5:44 IST
Last Updated 26 ಏಪ್ರಿಲ್ 2020, 5:44 IST
ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್
ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್   

ಮೈಸೂರು: ನಾನೂ ಸೇರಿದಂತೆ ಎಲ್ಲರೂ ಬಸವ ತತ್ವ ಪಾಲನೆ ಮಾಡಬೇಕು ಎಂದು ಕೋರಿಕೊಳ್ಳುತ್ತೇನೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.

ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿ, ನಂಜನಗೂಡಿನ ಔಷಧ ಕಾರ್ಖಾನೆಯಿಂದ ಸೋಂಕು ತಗುಲಲು ಮೂಲ ಕಾರಣ ಯಾವುದು ಎಂಬ ಬಗ್ಗೆ ಸೂಕ್ತ ತನಿಖೆಯಾಗಲು ಅಧಿಕಾರಿಯನ್ನು ನೇಮಿಸುವಂತೆ ನಾನು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೆ. ಈ ಹಿನ್ನೆಲೆಯಲ್ಲಿ ಕೊರೊನಾ ಪ್ರಕರಣಕ್ಕೆ ಜಿಲ್ಲಾ ಉಸ್ತುವಾರಿ ಅಧಿಕಾರಿಯಾಗಿರುವ ಹರ್ಷ ಗುಪ್ತ ಅವರು ಶೀಘ್ರವಾಗಿ ಕಾರ್ಖಾನೆಯ ಸೋಂಕಿನ ಮೂಲವನ್ನು ಪತ್ತೆಹಚ್ಚಿ ಸರ್ಕಾರಕ್ಕೆ ವರದಿ ಕೊಡಲು ಮುಖ್ಯಮಂತ್ರಿ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ವರದಿ ಬರಲಿದೆ ಎಂದು ತಿಳಿಸಿದರು.

ಕೊರೊನಾ ಪ್ರಕರಣಗಳು ಈಗ ಕಡಿಮೆಯಾಗಿದೆ. ಸರ್ಕಾರ ಸಾಕಷ್ಟು ಬಿಗಿಕ್ರಮಗಳನ್ನು ತೆಗೆದುಕೊಂಡ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಸಂಪೂರ್ಣ ಹತೋಟಿಗೆ ಬರಲಿದೆ ಎಂದು ಸಚಿವರು ತಿಳಿಸಿದರು.

ADVERTISEMENT

ಕನಿಷ್ಠ ಅಂತರ ಕಾಯ್ದುಕೊಳ್ಳಲು ವಿಫಲವಾಗುತ್ತಿರುವ ಹಿನ್ನೆಲೆಯಲ್ಲಿ ಎಂಜಿ ರಸ್ತೆಯ ಮಾರುಕಟ್ಟೆಯನ್ನು ಸ್ಥಳಾಂತರಿಸಲಾಗಿದೆ. ಸೂಕ್ತ ವ್ಯವಸ್ಥೆಯಾದ ಮೇಲೆ ಎಲ್ಲವೂ ಸರಿಯಾಗಲಿದೆ. ಸಾರ್ವಜನಿಕರ ಸಹಕಾರದ ಅವಶ್ಯಕತೆ ಇದೆ ಎಂದು ಸಚಿವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.