ADVERTISEMENT

ಮೈಸೂರಲ್ಲಿ ಬೆಮೆಲ್ ಕಾರ್ಖಾನೆಯ ಕಾರ್ಮಿಕರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2022, 4:56 IST
Last Updated 1 ಫೆಬ್ರುವರಿ 2022, 4:56 IST
ಬೆಮೆಲ್ ಕಾರ್ಖಾನೆಯ ಖಾಸಗೀಕರಣ ವಿರೋಧಿಸಿ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಕಾರ್ಮಿಕರು ಇಲ್ಲಿನ ಬೆಮೆಲ್ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಬೆಮೆಲ್ ಕಾರ್ಖಾನೆಯ ಖಾಸಗೀಕರಣ ವಿರೋಧಿಸಿ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಕಾರ್ಮಿಕರು ಇಲ್ಲಿನ ಬೆಮೆಲ್ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.   

ಮೈಸೂರು: ಬೆಮೆಲ್ ಕಾರ್ಖಾನೆಯ ಖಾಸಗೀಕರಣ ವಿರೋಧಿಸಿ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಕಾರ್ಮಿಕರು ಇಲ್ಲಿನ ಬೆಮೆಲ್ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಸಂಘದ ಅಧ್ಯಕ್ಷ ಎಚ್.ವೈ. ಮುನಿರೆಡ್ದಿ ಮಾತನಾಡಿ, ಸುಮಾರು 8 ಸಾವಿರ ಕಾರ್ಮಿಕರನ್ನು ಹೊಂದಿರುವ ಬೆಮೆಲ್ 1964ರಿಂದಲೂ ಲಾಭದಾಯಕ ಉದ್ದಿಮೆ ಎನಿಸಿದೆ. ದೇಶದ ರಕ್ಷಣಾ ವಲಯ, ಗಣಿ , ರಸ್ತೆ, ರೈಲ್ವೆ ಮತ್ತು ಮೆಟ್ರೊ ವಿಭಾಗಗಳಿಗೆ ಗಣನೀಯವಾಗಿ ಕೊಡುಗೆ ನೀಡಿದೆ. ಇಂತಹ ಉದ್ದಿಮೆಯನ್ನು ಖಾಸಗೀಕರಣ ಮಾಡಬಾರದು ಎಂದು ಒತ್ತಾಯಿಸಿದರು.

ಫೆ.5ರವರೆಗೂ ಕಾರ್ಖಾನೆಯ ಮುಖ್ಯದ್ವಾರದ ಬಳಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಪ್ರತಿಭಟನೆ ನಡೆಸಬೇಕು ಎಂದು ಕರೆ ನೀಡಿದರು.

ADVERTISEMENT

ಸಂಘದ ಉಪಾಧ್ಯಕ್ಷ ಗೋವಿಂದರೆಡ್ಡಿ, ಪ್ರಧಾನ ಕಾರ್ಯದರ್ಶಿ ಎಂ.ಡಿ. ರಾಜಶೇಖರಮೂರ್ತಿ, ಸಹ ಕಾರ್ಯದರ್ಶಿ ಸುರೇಶ ಮತ್ತು ಖಜಾಂಚಿ ಎಂ.ಬಿ.ಜಗದೀಶ ಸೇರಿದಂತೆ 800 ಕ್ಕೂ ಅಧಿಕ ಮಂದಿ ಕಾರ್ಮಿಕರು ಪ್ರತಿಭಟನೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.