ಬೆಟ್ಟದಪುರ: ಗ್ರಾಮದ ನಾಡಕಚೇರಿಯಲ್ಲಿ ₹60 ಸಾವಿರ ಬೆಲೆ ಬಾಳುವ ಎರಡು ಕಂಪ್ಯೂಟರ್‌ಗಳನ್ನು ಕಳವು ಮಾಡಲಾಗಿದೆ ಎಂದು ಉಪ ತಹಶೀಲ್ದಾರ್ ಶಶಿಧರ್ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸೆ.26 ಶನಿವಾರದಂದು ಎಂದಿನಂತೆ ಕಚೇರಿ ಕೆಲಸ ಮುಗಿಸಿ 5.30ರ ಸಮಯದಲ್ಲಿ ಬೀಗ ಹಾಕಿ ಸಿಬ್ಬಂದಿ ಮನೆಗೆ ತೆರಳಿದ್ದಾರೆ, ಸೋಮವಾರ ಬೆಳಗ್ಗೆ 8 ಗಂಟೆಗೆ ನಾಡಕಚೇರಿ ಸಿಬ್ಬಂದಿ ಸಂತೋಷ್ ಬಂದು ನೋಡಿದಾಗ ಮುಂದಿನ ಬಾಗಿಲಿನ ಬೀಗ ಒಡೆದಿರುವುದು ಗಮನಕ್ಕೆ ಬಂದಿದೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಿ ಬಳಕೆ ಮಾಡುತ್ತಿದ್ದ ಎರಡು ಕಂಪ್ಯೂಟರ್‌ಗಳು ಕಳ್ಳತನವಾಗಿರುವುದು ಗಮನಕ್ಕೆ ಬಂದಿದೆ. ಅಪರಾಧ ವಿಭಾಗದ ಪಿಎಸ್‌ಐ ಸ್ವಾಮಿ ನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾರ್ವಜನಿಕರ ಕೆಲಸ ಕಾರ್ಯನಿರ್ವಹಿಸಲು ಎರಡು ಕಂಪ್ಯೂಟರ್‌ಗಳನ್ನು ನೀಡಬೇಕೆಂದು ತಹಶೀಲ್ದಾರ್ ಅವರಿಗೆ ಮನವಿ ಪತ್ರ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.