
ಬೆಟ್ಟದಪುರ: ಸಮೀಪದ ಚಪ್ಪರದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಚೆಗೆ ರಾಷ್ಟ್ರೀಯ ಜಂತು ಹುಳು ನಿವಾರಣೆ ದಿನ ಆಚರಣೆ ಮಾಡಲಾಯಿತು.
ಕೇಂದ್ರದ ಆರೋಗ್ಯ ನಿರೀಕ್ಷಾಣಾಧಿಕಾರಿ ಎಚ್.ಎಸ್.ರವಿ ಮಾತನಾಡಿ, ಅಪೌಷ್ಟಿಕತೆ ಮತ್ತು ರಕ್ತಹೀನತೆಯಿಂದ ರಕ್ಷಿಸಿಕೊಳ್ಳಲು ಜಂತುಹುಳು ನಿವಾರಣೆಯ ಆಲ್‌ಬೆಂಡಜೋಲ್ ಮಾತ್ರೆ ಸೇವಿಸಬೇಕು. ಶಾಲೆಗಳು ಹಾಗೂ ಅಂಗನವಾಡಿಗಳಲ್ಲಿ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಕುಂಠಿತವಾಗದಂತೆ ಜಂತು ಹುಳು ಮಾತ್ರೆ ಸೇವನೆಯಿಂದ ರಕ್ಷಿಸಿಕೊಳ್ಳಬಹುದು ಎಂದರು.
ಮಕ್ಕಳು ಉಗುರುಗಳನ್ನು ಸ್ವಚ್ಚವಾಗಿ ಮತ್ತು ಚಿಕ್ಕದಾಗಿ ಇರಿಸಿಕೊಳ್ಳಬೇಕು. ಜಂತುಹುಳುಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಶುದ್ಧ ನೀರನ್ನು ಕುಡಿಯಬೇಕು. ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದರು.
ಮುಖ್ಯಶಿಕ್ಷಕ ಎಸ್.ಮಹೇಶ್, ಮಂಜುನಾಥ್ ಶಿಕ್ಷಕ ಅಶೋಕ್, ಆರೋಗ್ಯ ಸುರಕ್ಷಾಧಿಕಾರಿ ಚೈತ್ರಾ, ಸಮುದಾಯ ಆರೋಗ್ಯಾಧಿಕಾರಿ ಜಿ.ಎಂ.ರಚನಾ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.