ಬಂಧನ
(ಪ್ರಾತಿನಿಧಿಕ ಚಿತ್ರ)
ಬೆಟ್ಟದಪುರ: ಹೋಬಳಿಯ ಗ್ರಾಮವೊಂದರಲ್ಲಿ ಬಾಲಕಿಯೊಬ್ಬಳು ಗರ್ಭಿಣಿಯಾಗಿದ್ದು, ಮಗಳನ್ನೇ ಲೈಂಗಿಕವಾಗಿ ಬಳಸಿಕೊಂಡ ಆರೋಪದಲ್ಲಿ ತಂದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
‘ಹನ್ನೆರಡೂವರೆ ವರ್ಷದ ಬಾಲಕಿ ಎಂಟು ತಿಂಗಳ ಗರ್ಭಿಣಿಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಳು. ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದರು. ಆಕೆಯನ್ನು ವಿಚಾರಿಸಿದಾಗ ತಂದೆಯೇ ಒಂದು ವರ್ಷದಿಂದ ನಿರಂತರವಾಗಿ ಲೈಂಗಿಕವಾಗಿ ಬಳಸಿಕೊಂಡಿರುವುದಾಗಿ ಹೇಳಿಕೆ ನೀಡಿದ್ದಾಳೆ. ಆರೋಪಿಯನ್ನು ಪೋಕ್ಸೊ ಕಾಯ್ದೆ ಹಾಗೂ ಅತ್ಯಾಚಾರ ಆರೋಪದಡಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು.
ಬೆಟ್ಟದಪುರ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಅಜಯ್ ಕುಮಾರ್ ಹಾಗೂ ಕ್ರೈಂ ವಿಭಾಗದ ಸಬ್ ಇನ್‌ಸ್ಪೆಕ್ಟರ್ ಸ್ವಾಮಿ ನಾಯಕ್ ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.