ಸರಗೂರು: ತಾಲ್ಲೂಕಿನ ಅದಿ ದೇವತೆ ಚಿಕ್ಕದೇವಮ್ಮನ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ವಿಜೃಂಭಣೆಯಿಂದ ನೆರವೇರಿತು. ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದರು.
ಬೆಟ್ಟದ ಚಿಕ್ಕದೇವಮ್ಮ ದೇವಿಯನ್ನು ಮುತ್ತಿನ ಅಲಂಕಾರಗೊಳಿಸಿ, ನಿಂಬೆಹಣ್ಣು, ವಿವಿಧ ಹೂವುಗಳಿಂದ ಅಲಂಕೃತಗೊಳಿಸಲಾಗಿತ್ತು. ಬೆಳಗ್ಗೆ 9ರಿಂದ ವಿವಿಧ ಪೂಜಾ ಕಾರ್ಯಕ್ರಮ ನೆರವೇರಿಸಿ ನಂತರ ದೇವಾಲಯದ ಸುತ್ತ ಉತ್ಸವ ಮೂರ್ತಿ ಮೆರವಣಿಗೆ ನಡೆಸಲಾಯಿತು.
ಬೆಟ್ಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದು ಪುನೀತರಾದರು. ನವ ವಧು, ವರರು ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜೆ ನೆರವೇರಿಸಿದರು. ಭಕ್ತರಿಗೆ ಸಿಹಿ ವಿತರಣೆ ಮಾಡಲಾಯಿತು.
ದೇವಿಯ ಎದುರುಗಡೆ ಇರುವ ಕಾಲಭೈರವೇಶ್ವರಸ್ವಾಮಿಗೆ, ಭೀಮೇಶ್ವರನಿಗೂ ವಿಶೇಷವಾಗಿ ಸಿಂಗರಿಸಿ ಪೂಜೆ ನೆರವೇರಿಸಲಾಯಿತು.
ಪಾರುಪತ್ತೇದಾರ ಶಾಂತಿಪುರ ಮಹದೇವಸ್ವಾಮಿ, ಆರ್ಚಕರಾದ ಪ್ರಸನ್ನ ಕುಮಾರ್, ದೇವಣ್ಣ, ಸಂತೋಷ್, ಮನೋಹರ್, ಚಿಕ್ಕದೇವಣ್ಣ, ಸಿದ್ದಲಿಂಗಸ್ವಾಮಿ, ಶಿವಕುಮಾರ್, ನಿಂಗರಾಜು, ನಿಂಗಣ್ಣ ಲಿಂಗಪ್ಪ, ಮಣಿ, ಮನು, ನಿಂಗರಾಜು, ನಿಂಗಣ್ಣ, ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.