ಹುಣಸೂರು: ಬೈಕ್‌ಗಳು ಮುಖಾ ಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿ ಇಬ್ಬರು ತೀವ್ರ ಗಾಯಗೊಂಡಿದ್ದಾರೆ.
ಸಿರೇನಹಳ್ಳಿ ಗ್ರಾಮದ ಬಳಿ ಗುರುವಾರ ಮಧ್ಯಾಹ್ನ ಅಪಘಾತ ಸಂಭವಿಸಿದೆ. ಮರೂರು ಕಾವಲ್ ಗ್ರಾಮದ ನಿವಾಸಿ ಸಾಗರ್ (35) ಸಾವನ್ನಪ್ಪಿದ್ದಾರೆ.
ಕೆ.ಆರ್.ನಗರದ ಹೆಬ್ಬಾಳು ಗ್ರಾಮದಲ್ಲಿನ ಕಾರ್ಯಕ್ರಮಕ್ಕೆ ತೆರಳಿ ಸ್ವಗ್ರಾಮ ಮರೂರು ಕಾವಲ್‌ಗೆ ಹಿಂದಿರುಗುತ್ತಿದ್ದರು. ಇವರೊಂದಿಗೆ ಪ್ರಯಾಣಿಸುತ್ತಿದ್ದ ಅರಸು ಕಲ್ಲಹಳ್ಳಿ ಗ್ರಾಮದ ನಿವಾಸಿ ಹರೀಶ್ ತೀವ್ರವಾಗಿ ಗಾಯಗೊಂಡು ಹುಣಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ವಾಹನದ ಸವಾರ ಕೆಸ್ತೂರು ಕೊಪ್ಪಲು ಗ್ರಾಮದ ನಿವಾಸಿ ಕೆಂಡಗಣ್ಣ ಗಾಯಗೊಂಡಿದ್ದು, ಆತನನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಸಾಗರ್ ವಿವಾಹಿತರಾಗಿದ್ದು, ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ. ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಪೊಲೀಸ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.