ADVERTISEMENT

ಮೈಸೂರು: ಜೈವಿಕ ಇಂಧನ ಮಳಿಗೆ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2025, 5:22 IST
Last Updated 5 ಅಕ್ಟೋಬರ್ 2025, 5:22 IST
ಮೈಸೂರಿನಲ್ಲಿ ವಸ್ತುಪ್ರದರ್ಶನ ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಕಾರ್ಯ ಯೋಜನೆಗಳ ಪ್ರಾತ್ಯಕ್ಷಿಕೆಯಲ್ಲಿ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯು ನಿರ್ಮಿಸಿರುವ  ‘ಜೈವಿಕ ಇಂಧನ ಮಳಿಗೆ’ ಯನ್ನು ಮಂಡಳಿಯ ಅಧ್ಯಕ್ಷ ಎಸ್.ಈ. ಸುಧೀಂದ್ರ ಉದ್ಘಾಟಿಸಿದರು
ಮೈಸೂರಿನಲ್ಲಿ ವಸ್ತುಪ್ರದರ್ಶನ ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಕಾರ್ಯ ಯೋಜನೆಗಳ ಪ್ರಾತ್ಯಕ್ಷಿಕೆಯಲ್ಲಿ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯು ನಿರ್ಮಿಸಿರುವ  ‘ಜೈವಿಕ ಇಂಧನ ಮಳಿಗೆ’ ಯನ್ನು ಮಂಡಳಿಯ ಅಧ್ಯಕ್ಷ ಎಸ್.ಈ. ಸುಧೀಂದ್ರ ಉದ್ಘಾಟಿಸಿದರು   

ಮೈಸೂರು: ಇಲ್ಲಿನ ವಸ್ತುಪ್ರದರ್ಶನ ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಕಾರ್ಯ ಯೋಜನೆಗಳ ಪ್ರಾತ್ಯಕ್ಷಿಕೆಯಲ್ಲಿ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯು ನಿರ್ಮಿಸಿರುವ ‘ಜೈವಿಕ ಇಂಧನ ಮಳಿಗೆ’ ಯನ್ನು ಮಂಡಳಿಯ ಅಧ್ಯಕ್ಷ ಎಸ್.ಈ. ಸುಧೀಂದ್ರ ಉದ್ಘಾಟಿಸಿದರು.

ಬಳಿಕ ಮಾತನಾಡಿ, ‘ಮೈಸೂರು ನಗರದಲ್ಲಿನ ತ್ಯಾಜ್ಯ ಸಂಗ್ರಹಣೆ, ಜೈವಿಕ ಇಂಧನ ಉತ್ಪಾದನೆ ಹಾಗೂ ವಿತರಣೆ ಕುರಿತು ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದೊಂದಿಗೆ ಒಡಂಬಡಿಕೆ ಮಾಡಿಕೊಂಡು ಮುಂದಿನ ದಿನಗಳಲ್ಲಿ ಬಯೋಡೀಸೆಲ್, ಕಂಪ್ರೆಸ್ಡ್ ಬಯೋಗ್ಯಾಸ್ ಉತ್ಪಾದಿಸಿ ವಿತರಣೆ ಕುರಿತು ಕಾರ್ಯ ಯೋಜನೆ ರೂಪಿಸಬಹುದು’ ಎಂದರು.

‘ಮುಂದಿನ ದಿನಗಳಲ್ಲಿ ಜೈವಿಕ ಇಂಧನ ಕ್ಷೇತ್ರದಲ್ಲಿ ಸಮಗ್ರ ಬದಲಾವಣೆಯಾಗಲಿದ್ದು, ಬಂಡವಾಳ ಹೂಡಿಕೆ ದಾರರಿಗೆ ಪೂರಕ ವಾತಾವರಣ ನಿರ್ಮಾಣ ರಚನೆಯಾಗುವುದರ ಕುರಿತು ಯಾವುದೇ ಸಂಶಯವಿಲ್ಲ’ ಎಂದು ಹೇಳಿದರು.

ADVERTISEMENT

ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಜೈವಿಕ ಇಂಧನ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಎಲ್‌. ಶಿವ ಶಂಕರ್, ಹುಣಸೂರು ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಫಯಾಜ್, ಬಿ.ಆರ್‌. ಲೋಹಿತ್, ಯೋಜನಾ ಸಲಹೆಗಾರ ಡಾ.ದಯಾನಂದ ಜಿ.ಎನ್. ಎನ್‌ಐಇ  ಕಾಲೇಜಿನ ಬಿಆರ್‌ಐಡಿಸಿ ಕೇಂದ್ರದ ಸಂಯೋಜಕ ಶ್ಯಾಮ್ ಸುಂದರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.