ಎಚ್.ಡಿ.ಕೋಟೆ: ತಳಮಟ್ಟದಿಂದ ಪಕ್ಷ ಸಂಘಟನೆ ಮಾಡುವ ನಿಟ್ಟಿನಲ್ಲಿ ನಮ್ಮ ನಡೆ ಬೂತ್ ಕಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಕುಂಬ್ರಹಳ್ಳಿ ಸುಬ್ಬಣ್ಣ ತಿಳಿಸಿದರು.
ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ದುರಾಡಳಿತ ಹಾಗೂ ಹಗರಣಗಳು, ಮಿತಿಮೀರಿದೆ. ಭಾರತೀಯ ಜನತಾ ಪಕ್ಷ ಇದನ್ನು ಪ್ರಬಲವಾಗಿ ಖಂಡಿಸುತ್ತಾ ಬಂದಿದೆ. ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳು ಗೆಲುವು ಸಾಧಿಸಲು ತಳಮಟ್ಟದಿಂದ ಪಕ್ಷ ಸಂಘಟಿಸುವ ಕೆಲಸದಲ್ಲಿ ತೊಡಗಿದ್ದೇವೆ ಎಂದರು.
ಈಗಾಗಲೇ ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಆಗಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿಯು ಮೈತ್ರಿ ಮುಂದುವರಿಯಲಿದೆ ಎಂದು ತಿಳಿಸಿದರು.
ಮಾಜಿ ಶಾಸಕ ಬಾಲರಾಜ್ ಮಾತನಾಡಿ, ಕಾಂಗ್ರೆಸ್‌ನಲ್ಲಿ ಸತ್ಯ ಹೇಳುವವರಿಗೆ, ಗೌರವ ಸಿಗುವುದಿಲ್ಲ. ಆಡಳಿತ ಮಾಡುವುದಕ್ಕಾಗಿ ಜಾತಿಗಳಲ್ಲಿ ಒಡಕು ಉಂಟುಮಾಡುವ ಕೆಲಸ ಮೊದಲಿನಿಂದಲೂ ಮಾಡಿಕೊಂಡು ಬಂದಿದೆ. ನಿವೃತ್ತ ನ್ಯಾಯಾಧೀಶರಾದ ನಾಗಮೊಹನ್ ದಾಸ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿಗಣತಿ ನಡೆಸಿ, ಸರ್ಕಾರಕ್ಕೆ ವರದಿ ನೀಡಲಾಗಿದೆ. ಇದರ ಬಗ್ಗೆ ಕೂಡ ಅಪಸ್ವರ ಕೇಳಿ ಬರುತ್ತಿದೆ ಎಂದರು.
ಎಚ್.ಡಿ.ಕೋಟೆ, ಸರಗೂರು ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ಶಂಭೇಗೌಡ, ಗುರುಸ್ವಾಮಿ, ಮುಖಂಡರಾದ ಸುರೇಶ್ ಬಾಬು, ಮೊತ್ತ ಬಸವರಾಜಪ್ಪ, ವೆಂಕಟಸ್ವಾಮಿ, ರುದ್ರಪ್ಪ, ಗಿರೀಶ್, ರಾಜು, ಗುರುಸ್ವಾಮಿ, ಸೈಯದ್ ಅಕ್ರಮ್, ಬಸವರಾಜು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.