
ಮೈಸೂರು: ‘ಡಿಐಜಿ ರಾಮಚಂದ್ರ ರಾವ್ ವಜಾಗೊಳಿಸಬೇಕು ಹಾಗೂ ಶಿಡ್ಲಘಟ್ಟದ ರಾಜೀವಗೌಡರನ್ನು ತಕ್ಷಣ ಬಂಧಿಸಬೇಕು’ ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಗ್ರಾಮಾಂತರ ಮಹಿಳಾ ಮೋರ್ಚಾ ಸದಸ್ಯೆಯರು ಎಡಿಸಿ ಪಿ.ಶಿವರಾಜು ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಕುಂಬರಹಳ್ಳಿ ಸುಬ್ಬಣ್ಣ ಮಾತನಾಡಿ, ‘ಕಾನೂನು ರಕ್ಷಕರೇ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡರೆ ಜನಸಾಮಾನ್ಯರಿಗೆ ನ್ಯಾಯ ಹೇಗೆ ದೊರೆಯುತ್ತದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಮಹಿಳಾ ಮೋರ್ಚಾ ಅಧ್ಯಕ್ಷೆ ನಳಿನಿ ಗೌಡ ಮಾತನಾಡಿ, ‘ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಯಾವುದೇ ರಾಜಕೀಯ ಅಥವಾ ಅಧಿಕಾರದ ಪ್ರಭಾವಕ್ಕೆ ಅವಕಾಶ ನೀಡಬಾರದು’ ಎಂದು ಆಗ್ರಹಿಸಿದರು.
ಪ್ರಧಾನ ಕಾರ್ಯದರ್ಶಿ ಪರೀಕ್ಷಿತ್ ರಾಜೇ ಅರಸು ಮತ್ತು ನಗರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ ಮಾತನಾಡಿದರು.
ರಾಜ್ಯ ಉಪಾಧ್ಯಕ್ಷೆ ಪ್ರಪುಲ್ಲಾ ಮಲ್ಲಾಡಿ, ನಿಕಟ ಪೂರ್ವ ಜಿಲ್ಲಾದ್ಯಕ್ಷೆ ಮಂಗಳ ಸೋಮಶೇಖರ್, ಉಪಾಧ್ಯಕ್ಷೆ ಸುಲೋಚನ, ಲಕ್ಷ್ಮಿ, ಅರುಣಾ, ಮಂಜುಳಾ ತಟ್ಟೆಕೆರೆ, ನಿವೇದಿತಾ, ಅರುಣ ಮತ್ತು ಲಕ್ಷ್ಮಣ ತಟ್ಟೆಕೆರೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.