ಬಿಜೆಪಿ ಪ್ರತಿಭಟನೆ
ಮೈಸೂರು: ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಬಿಜೆಪಿ ವಕ್ತಾರ ಎಂ.ಜಿ. ಮಹೇಶ ' ಸಮಾಜವಾದಿ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ದಲಿತರಿಗೆ ಸೇರಿದ ಜಮೀನು ನುಂಗಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಅವರು ಅತ್ಯಂತ ಭ್ರಷ್ಟ ಮುಖ್ಯಮಂತ್ರಿ. ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು' ಎಂದು ಆಗ್ರಹಿಸಿದರು.
ಬಿಜೆಪಿ ಮುಖಂಡರನ್ನು ವಶಕ್ಕೆ ಪಡೆದ ಮಾತ್ರಕ್ಕೆ ಹೆದರುವುದಿಲ್ಲ. ಇಡೀ ಪ್ರಕರಣದಲ್ಲಿ ಬಿಜೆಪಿಗೆ ನೈತಿಕ ಗೆಲುವಾಗಿದೆ ಎಂದರು.
ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್. ಶ್ರೀವತ್ಸ, ಬಿಜೆಪಿ ಮೈಸೂರು ನಗರ ಘಟಕದ ಅಧ್ಯಕ್ಷ ಎಲ್. ನಾಗೇಂದ್ರ, ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.