ADVERTISEMENT

ಕೃಷ್ಣರಾಜದಲ್ಲಿ ಬಿಜೆಪಿಗೆ ಲಕ್ಷ ಲೀಡ್‌: ಶ್ರೀವತ್ಸ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2024, 13:09 IST
Last Updated 7 ಏಪ್ರಿಲ್ 2024, 13:09 IST
   

ಮೈಸೂರು: ‘ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಕೃಷ್ಣರಾಜ ಕ್ಷೇತ್ರದಲ್ಲಿ ಒಂದು ಲಕ್ಷ ಮತಗಳ ಲೀಡ್ ದೊರೆಯಲಿದೆ’ ಎಂದು ಶಾಸಕ ಟಿ.ಎಸ್. ಶ್ರೀವತ್ಸ ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷದ ಪರವಾಗಿ ವಿದ್ಯಾರಣ್ಯಪುರಂನಲ್ಲಿ ಭಾನುವಾರ ಮನೆ ಮನೆಗಳಿಗೆ ತೆರಳಿ ಪ್ರಚಾರ ನಡೆಸಿದ ವೇಳೆ ಮಾತನಾಡಿದ ಅವರು, ‘ದೇಶವನ್ನು ಮುನ್ನಡೆಸಲು ನರೇಂದ್ರ ಮೋದಿ ಸಮರ್ಥರು ಎಂಬುದು ದೇಶದ ಜನತೆಗೆ ಮನವರಿಕೆಯಾಗಿದೆ. ಆದ್ದರಿಂದ ನಮ್ಮದೇ ಸರ್ಕಾರ ಮತ್ತೊಮ್ಮೆ ಬರಲಿದೆ’ ಎಂದರು.

‘ಹತ್ತು ವರ್ಷಗಳಲ್ಲಿ ದೇಶದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಭಾರತವನ್ನು ವಿಶ್ವಗುರು ಆಗಿಸುವ ನಿಟ್ಟಿನಲ್ಲಿ ಪ್ರಧಾನಿ ಶ್ರಮಿಸುತ್ತಿದ್ದಾರೆ. ಜನಪರ ಮತ್ತು ಪಾರದರ್ಶಕ ಆಡಳಿತದ ಜತೆಗೆ ದೇಶದ ಸಂಸ್ಕೃತಿ, ಪರಂಪರೆಯನ್ನು ಎತ್ತಿ ಹಿಡಿಯುವ ಕೆಲಸನನ್ನೂ ಅವರು ಮಾಡಿದ್ದಾರೆ. ಕೋಟ್ಯಂತರ ಜನರ ಆಶಯವಾಗಿದ್ದ ರಾಮ ಮಂದಿರ ನಿರ್ಮಾಣ ಸೇರಿ ಅನೇಕ ಧಾರ್ಮಿಕ ಕ್ಷೇತ್ರಗಳನ್ನು ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ’ ಎಂದರು.

ADVERTISEMENT

ಎಸಿ ಮೋರ್ಚಾ ನಗರ ಘಟಕದ ಅಧ್ಯಕ್ಷ ವಿ.ಶೈಲೇಂದ್ರ, ಮೈಸೂರು ನಗರ ಘಟಕದ ಉಪಾಧ್ಯಕ್ಷ ಜೋಗಿ ಮಂಜು, ಮುಖಂಡರಾದ ಪಾರ್ಥಸಾರಥಿ, ರಮೇಶ್, ಜಗದೀಶ್, ಗೋಪಾಲ್ ರಾಜ್ ಅರಸ್, ಜೆ. ರವಿ, ಜಯರಾಮ್, ಜಗದೀಶ್, ಸಂದೀಪ್, ಧರ್ಮೇಂದ್ರ, ಶಿವಲಿಂಗ ಸ್ವಾಮಿ ಪಾಲ್ಗೊಂಡಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.