ADVERTISEMENT

ಕಾಂಗ್ರೆಸ್‌ ನಿರ್ಧಾರ ಸ್ವಾಗತಾರ್ಹ: ಬಿ.ಎಸ್‌.ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2022, 10:42 IST
Last Updated 23 ಆಗಸ್ಟ್ 2022, 10:42 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ಮೈಸೂರು: ‘ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಕಾಂಗ್ರೆಸ್‌ ಕೊಡಗಿನಲ್ಲಿ ಪಾದಯಾತ್ರೆಯನ್ನು ಕೈಬಿಟ್ಟಿರುವುದು ಸ್ವಾಗತಾರ್ಹ ಕ್ರಮವಾಗಿದೆ’ ಎಂದು ಬಿ.ಎಸ್‌.ಯಡಿಯೂರಪ್ಪ ಹೇಳಿದರು.

‘ಶಾಂತ ವಾತಾವರಣವಿದ್ದಾಗ ಕಾರ್ಯಕ್ರಮ ನಡೆಸಲಿ. ಕಾಂಗ್ರೆಸ್‌ ನಾಯಕರು ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ. ಬಿಜೆಪಿ ಕೂಡ ಯಾವುದೇ ಕಾರ್ಯಕ್ರಮ ನಡೆಸುವುದಿಲ್ಲ. ಈಗಾಗಲೇ ಕಾರ್ಯಕರ್ತರಿಗೆ ಸೂಚಿಸಲಾಗಿದೆ’ ಎಂದು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.