ಮೈಸೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿ ಚಾಮರಾಜ ಕ್ಷೇತ್ರದ ಯುವ ಮೋರ್ಚಾ ಕಾರ್ಯಕರ್ತರು ನಗರದ ಗಾಂಧಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
‘ದೇಶದ್ರೋಹಿಗಳನ್ನು ಬಂಧಿಸಿ’ ಎಂದು ಕೂಗುತ್ತಾ ಮೋಂಬತ್ತಿ ಹಿಡಿದು ಶ್ರದ್ಧಾಂಜಲಿ ಸಲ್ಲಿಸಿದರು.
ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಜಯಶಂಕರ್, ಮೈಸೂರು ನಗರ ಯುವ ಮೋರ್ಚಾ ಅಧ್ಯಕ್ಷ ಕಿರಣ್ ಗೌಡ, ಪ್ರಧಾನ ಕಾರ್ಯದರ್ಶಿ ಸಂತೋಷ್, ಭರತ್, ಚಾಮರಾಜ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಸಚಿನ್, ಕೃಷ್ಣರಾಜ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಮನು ಶೈವ, ಚಾಮುಂಡೇಶ್ವರಿ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಮಧು, ಅರ್ಜುನ್, ಪ್ರಜ್ವಲ್, ನರಸಿಂಹಮೂರ್ತಿ, ಬದ್ರಿಪ್ರಸಾದ್, ಪಂಕಜ್, ಕೀರ್ತಿರಾಜ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.