ADVERTISEMENT

ಪಿರಿಯಾಪಟ್ಟಣ | ಜನೌಷಧಿ ಕೇಂದ್ರ ಮುಚ್ಚುವ ನಿರ್ಧಾರ ಖಂಡಿಸಿ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2025, 16:05 IST
Last Updated 1 ಜೂನ್ 2025, 16:05 IST
ಪಿರಿಯಾಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗವಿರುವ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರದ ಎದುರುಶನಿವಾರ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ವಿ.ರಾಜೇಂದ್ರ, ಪಿ.ಜೆ.ರವಿ, ನಳಿನಿ, ಲೋಕಪಾಲಯ್ಯ, ರಮೇಶ್ ಇತರರು ಇದ್ದಾರೆ
ಪಿರಿಯಾಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗವಿರುವ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರದ ಎದುರುಶನಿವಾರ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ವಿ.ರಾಜೇಂದ್ರ, ಪಿ.ಜೆ.ರವಿ, ನಳಿನಿ, ಲೋಕಪಾಲಯ್ಯ, ರಮೇಶ್ ಇತರರು ಇದ್ದಾರೆ   

ಪಿರಿಯಾಪಟ್ಟಣ: ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದ ಮುಂಭಾಗ ಶನಿವಾರ ತಾಲ್ಲೂಕು ಬಿಜೆಪಿ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ವಿ.ರಾಜೇಂದ್ರ ಮಾತನಾಡಿ, ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಇರುವ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ಮುಚ್ಚಲು ನಿರ್ಧರಿಸಿರುವ ಸರ್ಕಾರದ ನಿರ್ಧಾರವು ಖಂಡನೀಯ ಎಂದು ತಿಳಿಸಿದರು.

ದೀನ ದಲಿತರು, ಬಡವರು, ಕೂಲಿ ಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದವರಿಗೆ ಅತಿ ಕಡಿಮೆ ದರದಲ್ಲಿ ಗುಣಮಟ್ಟದ ಔಷಧ ಒದಗಿಸುವ ಉದ್ದೇಶದಿಂದ ದೇಶದಾದ್ಯಂತ ಸರ್ಕಾರಿ ಆಸ್ಪತ್ರೆಗಳ ಆವರಣ ಮತ್ತು ಜನಸಂದಣಿ ಇರುವ ಪ್ರದೇಶಗಳಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದೆ. ಹಲವು ವರ್ಷಗಳಿಂದ ಈ ಕೇಂದ್ರಗಳು ಜನಪ್ರಿಯಗೊಂಡಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿವೆ. ಕೇಂದ್ರ ಸರ್ಕಾರದ ಈ ಜನಪ್ರಿಯ ಯೋಜನೆಯನ್ನು ಸಹಿಸದ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಇರುವ ಜನೌಷಧಿ ಕೇಂದ್ರಗಳನ್ನು ಮುಚ್ಚಲು ನಿರ್ಧರಿಸಿರುವುದನ್ನು ಬಿಜೆಪಿಯು ವಿರೋಧಿಸುತ್ತಿದೆ ಎಂದರು.

ADVERTISEMENT

ಸರ್ಕಾರದ ಈ ನಿರ್ಧಾರವನ್ನು ಕೂಡಲೇ ಹಿಂಪಡೆಯದಿದ್ದಲ್ಲಿ ರಾಜ್ಯದಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ತಾಲ್ಲೂಕು ಘಟಕದ ಪದಾಧಿಕಾರಿಗಳಾದ ಪಿ.ಜೆ.ರವಿ, ನಳಿನಿ, ಲೋಕಪಾಲಯ್ಯ, ರಮೇಶ್, ಕಿರಣ್, ಚನ್ನಬಸವರಾಜು ಸೇರಿ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.