
ಸರಗೂರು: ‘ಆರ್ಯ ಈಡಿಗ ಸಮಾಜದ ರಾಜ್ಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ತಾಲ್ಲೂಕು ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎಸ್.ಎನ್.ನಾಗರಾಜು ಕಾಂಗ್ರೆಸ್ ಪಕ್ಷವನ್ನು ಒತ್ತಾಸಿದರು.
ಸಚಿವ ಸ್ಥಾನ ಸಿಗಲಿ ಎಂದು ತಾಲ್ಲೂಕಿನ ಭೀಮನಕೊಲ್ಲಿ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ವಿಶೇಷ ಪೂಜೆ ಸಲ್ಲಿಸಿದ ಅವರು, ‘ಹಿಂದುಳಿದ ವರ್ಗದ ರಾಷ್ಟ್ರೀಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಕಳೆದ 50 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಮಾಡಿಕೊಂಡು ಬಂದಿದ್ದಾರೆ. ಎಐಸಿಸಿ ಸದಸ್ಯರಾಗಿ ಪಕ್ಷಕ್ಕಾಗಿ ಹಗಲಿರುಳು ಸೇವೆ ಮಾಡುತ್ತಿದ್ದಾರೆ‘ ಎಂದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸ್ಥಾನ ನೀಡುವ ಮೂಲಕ ನಮ್ಮ ಸಮಾಜಕ್ಕೆ ಸ್ಥಾನಮಾನ ದೊರಕಿಸಬೇಕು’ ಎಂದು ಒತ್ಥಾಯಿಸಿದರು.
ಸರಗೂರು ಆರ್ಯ ಈಡಿಗ ಸಮಾಜದ ಮುಖಂಡರಾದ ವೆಂಕಟೇಶ್, ತಾಲ್ಲೂಕು ಆರ್ಯ ಈಡಿಗ ಸಮಾಜದ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಶ್ರೀನಿವಾಸ್, ಪಾಪಣ್ಣ, ಎಸ್.ವಿ.ಸೋಮಶೇಖರ್, ಅಶ್ವತ್ಥ್, ವೆಂಕಟಪ್ಪ, ಲಕ್ಷ್ಮಣ, ಶ್ರೀನಿವಾಸ್, ನಾಗೇಂದ್ರ, ನಾಗೇಶ್, ಪಟೇಲ್ ನಾಗರಾಜು, ಶಿವಕುಮಾರ್, ಉಮೇಶ್, ಟಿ.ನಿಂಗಪ್ಪ, ಟೈಲರ್ ಕೃಷ್ಣ, ಆಟೊ ಶ್ರೀನಿವಾಸ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.