ಮೈಸೂರು: ‘ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ವಿರುದ್ಧ ತನಿಖೆ ನಡೆಸಲು ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿರುವುದು ಕೇಂದ್ರ ಸರ್ಕಾರದ ಪಕ್ಷಪಾತ ಧೋರಣೆಗೆ ನೀಡಿದ ಉತ್ತರದಂತಿದೆ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ. ರಾಮು ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಮುಖ್ಯಮಂತ್ರಿಗಳನ್ನು ರಾಜಕೀಯವಾಗಿ ಎದುರಿಸಲಾಗದ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಸಾಂವಿಧಾನಿಕ ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಇ.ಡಿ.ಯನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು ನ್ಯಾಯಾಲಯವೇ ಜನರಿಗೆ ತೋರಿಸಿ
ಕೊಟ್ಟಿದೆ. ಪಾರ್ವತಿ ಅವರ ವಿರುದ್ಧ ಸುಳ್ಳು ಪ್ರಕರಣ ಸೃಷ್ಟಿಸಿ, ಸಾರ್ವಜನಿಕವಾಗಿ ಎಂದೂ ಕಾಣಿಸಿಕೊಳ್ಳದ ಅವರಿಗೆ ನೀಡಿರುವ ಕಿರುಕುಳ ಅತ್ಯಂತ ಹೇಯವಾದುದು’ ಎಂದಿದ್ದಾರೆ.
‘ಯಾವುದೇ ಪಕ್ಷ ರಾಜಕೀಯ ಸಮರಕ್ಕೆ ಇ.ಡಿ. ಯಂತಹ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಮಾಡಬಾರದು. ಈಗಲಾದರೂ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ರಾಜ್ಯದ ಜನರ ಕ್ಷಮೆ ಕೇಳಬೇಕು’ ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.