ADVERTISEMENT

ಹುಣಸೂರು: ಮರಕ್ಕೆ ಡಿಕ್ಕಿ ಹೊಡೆದ ಬೊಲೆರೊ ವಾಹನ, ಸ್ಥಳದಲ್ಲೇ 6 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2022, 12:33 IST
Last Updated 20 ಏಪ್ರಿಲ್ 2022, 12:33 IST
   

ಹುಣಸೂರು: ತಾಲ್ಲೂಕಿನ ಕಲ್‌ಬೆಟ್ಟದ ಸಮೀಪ ಬುಧವಾರ ಬೊಲೆರೊ ವಾಹನ ಮರಕ್ಕೆ ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಗ್ರಾಮದ ಅನಿಲ್, ಸಂತೋಷ್, ವಿನುತ್, ರಾಜೇಶ್, ದಯಾನಂದ, ಬಾಬು ಮೃತಪಟ್ಟವರು.

ಅವರು ಹುಣಸೂರಿನಿಂದ ಮದುವೆ ಸಮಾರಂಭ ಮುಗಿಸಿಕೊಂಡು ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.