ADVERTISEMENT

ಮೈಸೂರು | ಬಾಂಬ್‌ ಮೇಲ್: ‘ಭಗ್ನ ಪ್ರೇಮಿ’ ಬಂಧನ

​ಪ್ರಜಾವಾಣಿ ವಾರ್ತೆ
Published 8 ಜುಲೈ 2025, 0:13 IST
Last Updated 8 ಜುಲೈ 2025, 0:13 IST
<div class="paragraphs"><p>ಬಂಧನ </p></div>

ಬಂಧನ

   

ಮೈಸೂರು: ರಾಜ್ಯದ ವಿವಿಧ ಕಡೆಗಳಿಗೆ ಇ– ಮೇಲ್‌ ಮೂಲಕ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ದೆಹಲಿ ಮೂಲದ ನಿಖಿಲ್‌ ಶರ್ಮಾನನ್ನು ಪೊಲೀಸರು ಭಾನುವಾರ ಬಂಧಿಸಿ, ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮೇ 2ರಂದು ನಗರ ಪೊಲೀಸ್‌ ಕಮಿಷನರ್‌ ಕಚೇರಿಗೆ ನಗರದ ವಿವಿಧ ಸ್ಥಳಗಳಲ್ಲಿ ಬಾಂಬ್‌ ಇಡಲಾಗಿದೆ ಎಂದು ಇ–ಮೇಲ್‌ ಸಂದೇಶ ಬಂದಿತ್ತು. ಅದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ನಗರದ ಪ್ರಮುಖ ಸ್ಥಳಗಳಲ್ಲಿ ತಪಾಸಣೆ ನಡೆಸಿದ್ದರು. ಬಳಿಕ ನಜರ್‌ಬಾದ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ADVERTISEMENT

ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌ ಆರೋಪಿ ಪತ್ತೆಗೆ ವಿಶೇಷ ತಂಡ ರಚಿಸಿದ್ದರು. ನಜರ್‌ಬಾದ್‌ ಠಾಣೆಯ ಇನ್‌ಸ್ಪೆಕ್ಟರ್‌ ಮಹದೇವಸ್ವಾಮಿ, ನಾರಾಯಣ, ಪ್ರವೀಣ್‌, ಶ್ರೀನಿವಾಸ, ಇಸ್ಮಾಯಿಲ್‌, ಗೋಪಾಲ್‌ ಅವರ ತಂಡವು ನಿಖಿಲ್‌ ಶರ್ಮಾನನ್ನು ಹುಬ್ಬಳ್ಳಿಯಲ್ಲಿ ವಶಕ್ಕೆ ಪಡೆದಿದೆ.

‘ಬಿ.ಕಾಂ ಪದವೀಧರನಾದ ಈತನು ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ, ಆಕೆ ಈತನ ಪ್ರೀತಿಯನ್ನು ನಿರಾಕರಿಸಿದ ಬಳಿಕ ಮಾನಸಿಕ ಸ್ಥಿಮಿತ ಕಳೆದುಕೊಂಡು ತಿರುಗಾಡುತ್ತಿದ್ದ. ಉತ್ತರಖಂಡದಲ್ಲಿ ಬೇರೆಯವರ ಮೊಬೈಲ್ ಬಳಸಿ ಇ– ಮೇಲ್‌ ಮೂಲಕ ಬಾಂಬ್‌ ಇಟ್ಟಿದ್ದೇನೆ ಎಂದು ಸಂದೇಶ ಕಳಿಸಿ, ನಂತರ ಜೈಲು ಸೇರಿದ್ದ. ಬಿಡುಗಡೆಗೊಂಡ ಬಳಿಕ ಅದೇ ಮಾದರಿಯಲ್ಲಿ ರಾಯಚೂರು, ಚಾಮರಾಜನಗರ, ಮೈಸೂರು, ಕೇರಳಕ್ಕೆ ಇ– ಮೇಲ್‌ ಸಂದೇಶ ಕಳುಹಿಸಿದ್ದ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.